Shubhashaya News

BREAKING : ನಂದಿನಿ ಹಾಲಿನ ದರ 3 ರೂ. ಹೆಚ್ಚಳ : `KMF’ ನಿಂದ ಸಿಎಂ ಸಿದ್ದರಾಮಯ್ಯಗೆ ಮನವಿ.!

ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಸಭೆ ನಡೆಸಲಿದ್ದು, ಹಾಲಿನ ದರ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ.

ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಈಗಾಗಲೇ ಸರಕಾರ ಕೆಎಸ್ಆರ್ಟಿಸಿ ಬಸ್ ಹಾಗು ಮೆಟ್ರೋ ಟಿಕೆಟ್ ಪ್ರಯಾಣದ ಅದರ ಏರಿಕೆ ಮಾಡಿ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆಯುವಂತೆ ಇದೀಗ ಮತ್ತೆ ದರ ಏರಿಕೆಯ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಏರಿಕೆ ಮಾಡಲು ನಿರ್ಧರಿಸಲಾಗಿದೆ.

Leave A Reply

Your email address will not be published.