Shubhashaya News

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಮೇ ತಿಂಗಳಲ್ಲೇ 3 ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮೆ.!

ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಮೇ ತಿಂಗಳಿನಲ್ಲಿ ಬಾಕಿ ಮೂರು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್‌) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.

ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

Leave A Reply

Your email address will not be published.