Shubhashaya News

`ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ’ : ರಾಜ್ಯದ `SSCL’ ವಿದ್ಯಾರ್ಥಿಗಳಿಗೆ ಸಚಿವ ಮಧುಬಂಗಾರಪ್ಪ ಕಿವಿಮಾತು.!

ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ.

ಇನ್ನೂ ಎಸ್ ಎಸ್ ಎಲ್ ಸಿ ಪರಿಕ್ಷೆ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದು, ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ… ಶುಭವಾಗಲಿ… ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

SMS ಮೂಲಕ ಫಲಿತಾಂಶ ಪಡೆಯಲು

KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ.

Leave A Reply

Your email address will not be published.