Shubhashaya News

ವಿದ್ಯಾರ್ಥಿಗಳೇ ಗಮನಿಸಿ : `ಪ್ರಥಮ ಪಿಯುಸಿ’ ಪ್ರವೇಶಾತಿಗೆ ಜೂ.21 ಕೊನೆಯ ದಿನ.!

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಪ್ರವೇಶಾತಿಗೆ ಜೂನ್ 21 ರವರೆಗೆ ಅವಕಾಶ ನೀಡಲಾಗಿದೆ.

ಪ್ರಥಮ ಪಿಯು ತರಗತಿಗಳಿಗೆ ಪ್ರವೇಶ ಪಡೆಯಲು ಜೂ.16ರಿಂದ 21ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.23ರಿಂದ 26 ಮತ್ತು 2220 ರೂ. ವಿಶೇಷ ದಂಡ ಶುಲ್ಕ ಮತ್ತು 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಜೂ.30 ಕೊನೆಯ ದಿನವಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Leave A Reply

Your email address will not be published.