Shubhashaya News

ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣ ಸದ್ಯ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದರಲ್ಲೂ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್ ಪಾಟೀಲ್ ಅವರು ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ಉಂಟು ಮಾಡಿದೆ.

ಇದೀಗ ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ಬಿ.ಆರ್ ಪಾಟೀಲ್ ಅವರಿಗೆ ಬೆಂಗಳೂರಿಗೆ ಬಂದು ಭೇಟಿ ಮಾಡುವಂತೆ ಬುಲಾವ್ ನೀಡಿದ್ದಾರೆ. ಬಿ.ಆರ್ ಪಾಟೀಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಫೋನ್ ಮಾಡಿ ಜೂನ್ 25ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿಯಾಗುವಂತೆ ಸೂಚನೆ ನೀಡಿದ್ದಾರೆ ಎಂದು ಬಿಆರ್ ಪಾಟೀಲ್ ಆಪ್ತ ವಲಯಗಳಿಂದ ಮಾಹಿತಿ ತಿಳಿದು ಬಂದಿದೆ.

Leave A Reply

Your email address will not be published.