Shubhashaya News

ಮುಷ್ಕರಕ್ಕೆ ಬೆಂಬಲಿಸಿ ಆಳಂದನಲೂ ಸಿಐಯುಟಿ ಪ್ರತಿಭಟನೆ

ಆಳಂದ: ಬೇಡಿಕೆಗೆ ಒತ್ತಾಯಿಸಿ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಆಳಂದ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲವಾಗಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಯುಟಿ) ಆಳಂದ ತಾಲೂಕ ಘಟಕದ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.
18 ಪ್ರಮುಖ ಬೇಡಿಕೆಗಳನ್ನು ಒತ್ತಾಯಿಸಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಮಿಕರ ಹಕ್ಕುಗಳ ರಕ್ಷಣೆ, ಕನಿಷ್ಠ ವೇತನ ಹೆಚ್ಚಳ, ಸಾರ್ವಜನಿಕ ವಲಯದ ಖಾಸಗೀಕರಣ ತಡೆ, ಮತ್ತು ಕಾರ್ಮಿಕ ಕಾನೂನುಗಳ ಸುಧಾರಣೆಯಂತಹ ಬೇಡಿಕೆಗೆ ಆಗ್ರಹಿಸಿದರು.
ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಕಾನೂನು ಸಂಹಿತೆಗಳನ್ನು ಟೀಕಿಸಿದರು, ಇವು ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳುವ ಮತ್ತು ಉದ್ಯೋಗಿಗಳಿಗೆ ಒಲವಿನ ನೀತಿಗಳನ್ನು ಜಾರಿಗೊಳಿಸುವ ಗುರಿಯನ್ನು ಹೊಂದಿವೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರು ಕನಿಷ್ಠ ವೇತನವನ್ನು ತಿಂಗಳಿಗೆ ರೂ. 26,000ಕ್ಕೆ ಏರಿಕೆ ಮಾಡುವುದು, ಎಂಜಿಎನ್‍ಆರ್‍ಜಿಎ ಕಾರ್ಮಿಕರಿಗೆ ಕೆಲಸದ ದಿನಗಳು ಮತ್ತು ವೇತನ ಹೆಚ್ಚಳ, ಮತ್ತು ಎಲ್ಲರಿಗೂ ಸಾಮಾಜಿಕ ಭದ್ರತೆ ಒದಗಿಸುವಂತಹ ಆಗ್ರಹಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮಾತನಾಡಿದ
ಪ್ರತಿಭಟನಾಕಾರರು “ಕೇಂದ್ರದ ಕಾರ್ಮಿಕ ವಿರೋಧಿ ನೀತಿಗಳನ್ನೇ ರದ್ದುಗೊಳಿಸಬೇಕು”, “ಬೆಲೆ ಏರಿಕೆ ತಕ್ಷಣ ಕಡಿಮೆ ಮಾಡಬೇಕು” ಎಂದು ಒತ್ತಾಯಿಸಿದರು.
ಬಳಿಕ ತಹಶಿಲ್ದಾರರ ಸೇರಿದಂತೆ ವಿವಿಧ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸುಮಾರು ಎರಡು ಘಂಟೆ ನಡೆದ ಪ್ರತಿಭಟನೆಯಿಂದ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಕ್ತವಾಗಿತ್ತು.ವಾಹನ ಸವಾರರು ಪರದಾಡಿದರು. ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಟ್ಟು, ಕಾರ್ಮಿಕರ ಒಳಿತಿಗಾಗಿ ಕೆಲಸ ಮಾಡಬೇಕು,” ಎಂದು ಒತ್ತಾಯಿಸಿದರು. ಈ ಪ್ರತಿಭಟನೆಯು ರಾಷ್ಟ್ರವ್ಯಾಪಿ ಮುಷ್ಕರದ ಭಾಗವಾಗಿ ಪಟ್ಟಣದಲ್ಲಿ ಹಲವು ಬ್ಯಾಂಕಿಂಗ್ ಕಾರ್ಯನಿರ್ವಹಿಸಲಿಲ್ಲ ಗ್ರಾಹಕರು ಪರದಾಡಿದರು.
ಈ ಸಂದರ್ಭದಲ್ಲಿ ಡಿ.ವಾಯ್.ಎಫ್.ಆಯ್ ರಾಜಾಧ್ಯಕ್ಷೆ ಲವಿತ್ರ ವಸ್ತ್ರದ, ಆಙಈI ಸಂಚಾಲಕ ಪ್ರವೋದ ಪಾಂಚಾಳ, ಸಲಮಾನ್, ಎಸ್.ಎಫ್.ಆಯ್ ನ ಮೇಘಾ ಚಿಚಕೋಟಿ, ಅಂಗನವಾಡಿಯ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪುμÁ್ಪವತಿ ಅಶೋಕ ಚಟ್ಟಿ, ರಾಜಮತಿ ಪಾಟೀಲ, ಸುಗಂಧಾ ಮಾವಿನಕರ, ಕರ್ನಾಟಕ ರಾಜ್ಯ ಗ್ರಾಪಂ.ನೌಕರರ ಸಂಘದ ತಾಲೂಕು ಅಧ್ಯಕ್ಷ ಮಲ್ಲು ಅಲ್ಲಾಪುರ, ಸದಸ್ಯ ಹಣಮಂತರಾಯ್ ಕೆ.ಮದಗುಣಕಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತ ಮತ್ತಿತರರು ಪಾಲ್ಗೊಂಡಿದ್ದರು.

Comments are closed.

Don`t copy text!