Shubhashaya News

ತಂಬಾಕು ನಿಷೇಧ ಕಾಯ್ದೆ ಜಾರಿಗೆ ಕಟ್ಟುನಿಟ್ಟಿನ ರೇಡ್

ಆಳಂದ: ತಂಬಾಕು ನಿಷೇಧ ಕಾಯ್ದೆಯಡಿ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ಫೀರದೋಸ್ ಅನ್ಸಾರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಉತ್ಪನ್ನಗಳ ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿದರು.

ಆಳಂದ: ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಪುರಸಭೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಮತ್ತು ಪೆÇಲೀಸ್ ಇಲಾಖೆಗಳ ಸಂಯುಕ್ತ ತಂಡವು ತಂಬಾಕು ನಿಷೇಧ ಕಾಯ್ದೆ ಅಡಿಯಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿದೆ.
ಈ ಕಾರ್ಯಾಚರಣೆಯಲ್ಲಿ ಪುರಸಭೆ ಅಧ್ಯಕ್ಷ ಫೀರುದೋಸ್ ಅನ್ಸಾರಿ, ತಾಲೂಕ ಆರೋಗ್ಯ ಅಧಿಕಾರಿ ಸುಶೀಲ್ ಕುಮಾರ್ ಅಂಬೋರೆ, ಪುರಸಭೆ ಪರಿಸರ ಅಭಿಯಂತರ ರವಿಕಾಂತ್ ಮಿಸ್ಕಿನ್, ಮತ್ತು ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ ನಂದಿಕೋಲ್ಮಠ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
ಆಳಂದ್ ಪಟ್ಟಣದ ವಿವಿಧ ವಾಣಿಜ್ಯ ಪ್ರದೇಶಗಳು, ಶಾಲಾ-ಕಾಲೇಜುಗಳ ಸಮೀಪದ ಅಂಗಡಿಗಳು, ಮತ್ತು ಜನನಿಬಿಡ ಪ್ರದೇಶಗಳಲ್ಲಿ ಈ ರೇಡ್ ನಡೆಸಲಾಯಿತು.
ತಂಬಾಕು ಉತ್ಪನ್ನಗಳಾದ ಸಿಗರೇಟ್, ಬೀಡಿ, ಗುಟ್ಕಾ, ಖೈನಿ ಮತ್ತು ಇತರ ತಂಬಾಕು ಆಧಾರಿತ ಉತ್ಪನ್ನಗಳ ಮಾರಾಟವನ್ನು ಕಟ್ಟುನಿಟ್ಟಾಗಿ ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಾಚರಣೆ ಆಯೋಜಿಸಲಾಗಿತ್ತು. ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿμÉೀಧಿಸುವ ಅಔಖಿPಂ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿರುವ ಅಂಗಡಿಗಳ ಮೇಲೆ ವಿಶೇಷ ಗಮನಹರಿಸಲಾಯಿತು.
ಕಾರ್ಯಾಚರಣೆಯ ಸಂದರ್ಭದಲ್ಲಿ, ತಂಬಾಕು ಉತ್ಪನ್ನಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿದ್ದ ಹಲವಾರು ಅಂಗಡಿಗಳನ್ನು ಗುರುತಿಸಲಾಯಿತು. ಕೆಲವು ಅಂಗಡಿಗಳಲ್ಲಿ ನಿμÉೀಧಿತ ತಂಬಾಕು ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದ್ದು, ಗುಟ್ಕಾ, ಸಿಗರೇಟ್, ಮತ್ತು ಇತರ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಜೊತೆಗೆ, ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಅಂಗಡಿಯವರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದರು.
ಪುರಸಭೆ ಅಧ್ಯಕ್ಷ ಫೀರುದೋಸ್ ಅನ್ಸಾರಿ ಮಾತನಾಡಿ, “ತಂಬಾಕು ಉತ್ಪನ್ನಗಳು ಯುವ ಜನಾಂಗದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಮಾರಾಟವನ್ನು ಸಂಪೂರ್ಣವಾಗಿ ನಿμÉೀಧಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ರೇಡ್ ಕೇವಲ ಆರಂಭವμÉ್ಟೀ, ಮುಂದಿನ ದಿನಗಳಲ್ಲಿ ಇಂತಹ ಕಾರ್ಯಾಚರಣೆಗಳನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು,” ಎಂದು ತಿಳಿಸಿದರು.
ತಾಲೂಕ ಆರೋಗ್ಯ ಅಧಿಕಾರಿ ಸುಶೀಲ್ ಕುಮಾರ್ ಅಂಬೋರೆ, “ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಜನರಲ್ಲಿ ಜಾಗೃತಿಯನ್ನು ಮೂಡಿಸುವ ಜೊತೆಗೆ, ಕಾನೂನಿನ ಜಾರಿಗೆ ನಾವು ಬದ್ಧರಾಗಿದ್ದೇವೆ,” ಎಂದು ಒತ್ತಿ ಹೇಳಿದರು.
ಪುರಸಭೆ ಪರಿಸರ ಅಭಿಯಂತರ ರವಿ ಕಾಂತ್ ಮತ್ತು ಆರೋಗ್ಯ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ ನಂದಿಕೋಲ್ಮಠ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಬ್ದುಲ್ ರಾವೂಫ್ ಶಿಕ್ಷಣ ಇಲಾಖೆಯ ಅಧಿಕಾರಿ ಶ್ರೀಮಂತ ಪಾಟೀಲ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇತರ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.

Don`t copy text!