Shubhashaya News

ಸಿಯುಕೆ ಕೊಠಡಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯ ಆತ್ಮಹತ್ಯೆ

ಆಳಂದ: ತಾಲೂಕಿನ ಕಡಗಂಚಿ ಬಳಿ ಇರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬುಧವಾರ ಮಧ್ಯಾಹ್ನ ಒಡಿಶಾ ಮೂಲದ 20 ವರ್ಷದ ವಿದ್ಯಾರ್ಥಿನಿ ಜಯಶ್ರೀ ನಾಯಕ ಅವರು ತಮ್ಮ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಜಯಶ್ರೀ ನಾಯಕ ಅವರು ಪ್ರಾಣಿಶಾಸ್ತ್ರ ವಿಭಾಗದ 5ನೇ ಸೆಮಿಷ್ಟರ್ ವಿದ್ಯಾರ್ಥಿನಿಯಾಗಿದ್ದು, ವಿವಿಯ ಯಮುನಾ ಹಾಸ್ಟೆಲ್‍ನ ಕೊಠಡಿ ಸಂಖ್ಯೆ 1ರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದರು ಎಂದು ಮೂಲಗಳು ಹೇಳಿಕೊಂಡಿವೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಡೀನ್ ಆಫ್ ಸ್ಟೂಡೆಂಟ್ಸ್ ವೆಲ್ಫೇರ್ ಬಸವರಾಜ ಕುಬಕಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಕಣ್ಣೀರು ಹಾಕಿದ್ದಾಳೆ ಎನ್ನಲಾಗಿದೆ.
ಬುಧವಾರ ಅವರು ತರಗತಿಗೆ ಹಾಜರಾಗದ ಕಾರಣ ಮಧ್ಯಾಹ್ನ ಅವರ ಕೋಣೆಯ ಬಾಗಿಲಿಗೆ ಬೀಗ ಹಾಕಿರುವುದನ್ನು ಗಮನಿಸಿದ ಸ್ನೇಹಿತರು ಆತಂಕಗೊಂಡು ಬಾಗಿಲು ಮುರಿದಾಗ, ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಕಂಡುಬಂದಿತು.
ಘಟನಾ ಸ್ಥಳಕ್ಕೆ ಈ ಕುರಿತು ನರೋಣಾ ಪೆÇಲೀಸ್ ಭೇಟಿ ನೀಡಿ ಪ್ರಕರಣ ಪತ್ತೆಗೆ ತನಿಖೆ ಆರಂಭಿಸಿದ್ದು, ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮರಣಕ್ಕೆ ಕಾರಣ ಪತ್ತೆಹಚ್ಚಲು ವಿದ್ಯಾರ್ಥಿನಿಯ ಮೊಬೈಲ್, ದಿನಚರಿ ಮತ್ತು ಇತರ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮನೋಒತ್ತಡ, ಭಾವನಾತ್ಮಕ ಸಮಸ್ಯೆಗಳ ಬಗ್ಗೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಆಗಿದೆ. ಸರ್ಕಾರ ಒದಗಿಸಿರುವ 104 ಮತ್ತು 14416 ಎಂಬ ಸಹಾಯವಾಣಿ ಸಂಖ್ಯೆಗಳ ಮೂಲಕ ಯಾವುದೇ ಸಮಸ್ಯೆಯ ಎದುರಿನಲ್ಲಿ ಸಹಾಯವನ್ನು ಪಡೆದುಕೊಳ್ಳಬಹುದು. ಜಯಶ್ರೀ ನಾಯಕ ಅವರ ಈ ದುಃಖದ ಸಂಗತಿ ಕೇಂದ್ರೀಯ ವಿವಿ ಶಿಕ್ಷಣ ಕ್ಷೇತ್ರಕ್ಕೆ ತೀವ್ರ ಪಾಠವಾಗಿದ್ದು, ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಲ್ಲರೂ ಜಾಗೃತರಾಗಬೇಕಿದೆ.

Comments are closed.

Don`t copy text!