Shubhashaya News

ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ

ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಆಯೋಗ ದಿನಾಂಕ ಘೋಷಣೆ ಮಾಡಿದೆ. ಹಾಗಾದ್ರೆ ಯಾವಾಗ, ಹೇಗೆ ನಡೆಯಲಿದೆ ಹಾಗೂ ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ ಯಾವಾಗ ಎನ್ನುವ ಸಂಪರ‍್ಣ ಮಾಹಿತಿಯನ್ನ ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇತ್ತೀಚೆಗಷ್ಟೇ ಜಗದೀಪ್‌ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ತೆರವಾಗಿರುವ ಈ ಸ್ಥಾನಕ್ಕೆ ಸೆಪ್ಟೆಂಬರ್ ೯ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.

ಜಗದೀಪ್‌ ಧನ್‌ಕರ್‌ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆ ಆರಂಭಿಸಿದ್ದು, ಈ ಸ್ಥಾನಕ್ಕೆ ಸೆಪ್ಟೆಂಬರ್ ೯ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್​೨೧ ಕೊನೆಯ ದಿನಾಂಕ ಆಗಿದೆ ಎಂದು ತಿಳಿಸಿದೆ.

Comments are closed.

Don`t copy text!