ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರೆದಿದ್ದು, ಕಳೆದ ಜೂನ್ ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲಿ 45ಕ್ಕೂ ಹೆಚ್ಚು ಜನರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದರು. ಇದೀಗ ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ 24 ವರ್ಷದ ಯುವಕನೊಬ್ಬ ಮನೆಯಲ್ಲಿದ್ದಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಹೌದು ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಜೋಪಡಪಟ್ಟಿ ನಿವಾಸಿ ಪಾಷಾ ಖುರೆಷಿ (24) ಸಾವನಪ್ಪಿದ್ದಾನೆ. ಜೇವರ್ಗಿ ಪಟ್ಟಣದಲ್ಲಿ ಖುರೇಶಿ ಆಟೋ ಚಾಲಕನಾಗಿ ಕೆಲಸ ಮಾಡ್ತಿದ್ದ ಮನೆಯಲ್ಲಿದ್ದಾಗಲೇ ಖುರೇಶಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬಸ್ಥರು ಖುರೇಶಿಯನ್ನು ಜೇವರ್ಗಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗ ಖುರೆಷಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ.
Comments are closed.