ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಎಸ್ಐಟಿ ನಡೆಸುತ್ತಿದ್ದು, ಇದೀಗ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ.
ಹೌದು, ಈಗಾಗಲೇ ಗುರುತಿಸಲಾದ 15 ಪಾಯಿಂಟ್ ಗಳು ಮಾತ್ರವಲ್ಲದೆ, ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿಯೂ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ. 15 ಮಾತ್ರವಲ್ಲ, ಮತ್ತಷ್ಟು ಸ್ಥಳಗಳಲ್ಲೂ ಎಸ್ಐಟಿ ಹುಡುಕಾಟ ನಡೆಸಲಿದೆ. ಅಲ್ಲದೆ 13ನೇ ಪಾಯಿಂಟ್ ನಲ್ಲಿ ಶೋಧಕ್ಕೆ ಜಿಪಿಆರ್ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಪಿಆರ್ ಯಂತ್ರ ಬಂದ ನಂತರ 13ನೇ ಪಾಯಿಂಟ್ ಗೆ ಎಸ್ಐಟಿ ಆಗಮಿಸಲಿದೆ. ಈ ಕುರಿತಾಗಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಎಸ್ಐಟಿ ನಡೆಸುತ್ತಿದೆ. ಇಂತಹ ಎಸ್ಐಟಿಗೆ ಪೊಲೀಸ್ ಠಾಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಈ ಮೂಲಕ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆಯನ್ನು ನೀಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ಧರ್ಮಸ್ಥಳದಲ್ಲೇ ಬೀಡು ಬಿಟ್ಟಿರುವಂತ ಎಸ್ಐಟಿ ತಂಡವು ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಎಸ್ಐಟಿಗೆ ಪೊಲೀಸ್ ಠಾಣೆ ಘೋಷಿಸಿದೆ. ಅಲ್ಲದೇ ಎಸ್ಐಟಿಗೆ ಪೊಲೀಸ್ ಠಾಣೆಯ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದಲ್ಲದೇ ವಿಶೇಷ ತನಿಖಾ ತಂಡಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಅಧಿಕಾರವನ್ನು ಬಿಎನ್ಎಸ್ಎಸ್ ಅಡಿಯಲ್ಲಿ ನೀಡಿದೆ.
Comments are closed.