Shubhashaya News

ರಾಜ್ಯ ಸರ್ಕಾರದಿಂದ `PSI’ ಹುದ್ದೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ : 15 ದಿನದಲ್ಲಿ ನೇಮಕಾತಿ ಆದೇಶ

ಪಿಎಸ್ ಐ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, 15 ದಿನದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾದ 545 ಮಂದಿಗೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ 545 ಪಿಎಸ್ಐ ನೇಮಕಾತಿಯಲ್ಲಿ ಹಗರಣವಾಗಿತ್ತು. ಈಗ ಆದೇಶ ನೀಡಿದ 545 ಮಂದಿ ತರಬೇತಿಯಲ್ಲಿದ್ದಾರೆ. 402 ಮಂದಿಗೆ ಮೆಡಿಕಲ್ ಟೆಸ್ಟ್ ನಡೆಯುತ್ತಿದ್ದು, 15 ದಿನದಲ್ಲಿ ನೇಮಕಾತಿ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ. .

ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ ಬಂದಿದ್ದು, ಆಗಸ್ಟ್ 19 ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Comments are closed.

Don`t copy text!