ಆಳಂದ: ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಕ್ಷೇತ್ರದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ನಿರಂತರ ಸುಳ್ಳು ಅಪಪ್ರಚಾರ ಭಕ್ತರಲ್ಲಿ ಆಘಾತ ಮೂಡಿಸಿದೆ ಎಂದು ಪಡಸಾವಳಿ ಶ್ರೀ ಶಂಭುಲಿಂಗ ಶಿವಾಚಾರ್ಯರ ಸಂಸ್ಥಾನ ಹಿರೇಮಠದ ಕಾರ್ಯದರ್ಶಿ ಶಾಂತಪ್ಪ ಕೋರೆ ಅವರು ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು, ಕಿಡಿಗೇಡಿಗಳಾದ ಮಹೇಶ ಶೆಟ್ಟಿ ತಿಮ್ಮರೋಡಿ, ಗಿರೀಶ್ ಮಟ್ಟನ್ನವರ್, ಜಯಂತ್ ಟಿ, ಅಜಯ್ ಅಂಚನ್, ಸಂತೋμï ಶೆಟ್ಟಿ, ಸಮೀರ್ ಎಂ ಡಿ ಹಾಗೂ ಅವರ ಸಹಚರರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅವರು ಪತ್ರದಲ್ಲಿ, ಉಚ್ಚ ನ್ಯಾಯಾಲಯವು ಸಾಮಾಜಿಕ ಮಾಧ್ಯಮಗಳಲ್ಲಿ ಧರ್ಮಸ್ಥಳ ಮತ್ತು ಡಾ. ಹೆಗ್ಗಡೆ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದೆಂದು ಸ್ಪಷ್ಟ ಆದೇಶ ನೀಡಿದ್ದರೂ, ಆರೋಪಿಗಳು ಅದನ್ನು ಧಿಕ್ಕರಿಸಿ ಸುಳ್ಳು ಪ್ರಚಾರ ಮುಂದುವರೆಸುತ್ತಿದ್ದಾರೆ. ಇದರಿಂದ ಕೋಟ್ಯಾಂತರ ಭಕ್ತರ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಕೋರೆ ಬೇಸರ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಅನಾಮಿಕ ದೂರಿನ ಆಧಾರದ ಮೇಲೆ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಆದರೆ ಈ ತನಿಖೆ ಅರ್ಥಪೂರ್ಣವಾಗಬೇಕಾದರೆ ಆರೋಪಿಗಳನ್ನು ಗಂಭೀರವಾಗಿ ವಿಚಾರಣೆ ನಡೆಸಿ, ಸತ್ಯಾಂಶವನ್ನು ಬಯಲಿಗೆ ತಂದು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿಯೂ ಇಂತಹ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಹರಡದಂತೆ ತಡೆಗಟ್ಟುವ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರೆ ಮನವಿ ಮಾಡಿದ್ದಾರೆ.
Prev Post
Comments are closed.