Shubhashaya News

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ : ಯೂಟ್ಯೂಬರ್ ಸಮೀರ್ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು.!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಗೆ ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ಯೂಟ್ಯೂಬರ್ ಸಮೀರ್ ಗೆ ಆಗಸ್ಟ್ 24 ರಂದು ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ನೀಡಿದ್ದಾರೆ.

ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

Comments are closed.

Don`t copy text!