Shubhashaya News

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ : ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಾಲ್ಮೀಕಿ ಹಗರಣ ಮುಡಾ ಹಗರಣದ ಬಳಿಕ ಇದೀಗ ಭೋವಿ ಅಭಿವೃದ್ಧಿ ನಿಗಮದಲ್ಲೂ ಕೂಡ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಈ ನೆಲೆಯಲ್ಲಿ ಬೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ.

ಹೌದು ಭೋವಿ ನಿಗಮದ ಅಧ್ಯಕ್ಷ ರಾಜೀನಾಮೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ರವಿಕುಮಾರ್ ಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ ಲಂಚದ ಆರೋಪ ಬಯಲಾಗುತ್ತಿದ್ದಂತೆ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಹಾಗಾಗಿ ರವಿಕುಮಾರ್ ಶೀಘ್ರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave A Reply

Your email address will not be published.