Shubhashaya News

ಯಜಮಾನಿಯರಿಗೆ ಗುಡ್ ನ್ಯೂಸ್ : ಬಾಕಿ ಇರುವ 2 ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ

ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಇನ್ನೂ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.

ನಮ್ಮ ಗೃಹ ಲಕ್ಷ್ಮಿಯನ್ನು ಕಾಪಿ ಮಾಡಿ, ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕ ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದರು.

ಇನ್ನು ಕಳೆದ ಬಾರಿ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1,000 ಗೌರವಧನ ಹೆಚ್ಚಳ ಮಾಡಲಾಗಿದೆ. ಮತ್ತೆ ಮುಂದಿನ ಬಜೆಟ್ ನಲ್ಲಿ ಗೌರವಧನವನ್ನು 1,000 ಹೆಚ್ಚಳ ಮಾಡುವುದಾಗಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವಧನ ಹೆಚ್ಚಳದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದರು.

Comments are closed.

Don`t copy text!