ಆಳಂದ ಪಟ್ಟಣದ ಪ್ರತಿಷ್ಠಿತ ಜೀವನ ಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಪದವಿ ಪೂರ್ವ ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ಪ್ರಥಮ ವರ್ಷದ ಪ್ರವೇಶಾತಿಗಾಗಿ ಪ್ರತಿಭಾ ಶೋಧ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ವಿಜ್ಞಾನ ವಿಭಾಗದ ಮುಖ್ಯಸ್ಥೆ ಜ್ಯೋತಿ ವಿಶಾಕ್ ತಿಳಿಸಿದ್ದಾರೆ.
ಡಿ. 28ರ ರವಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಪ್ರಸ್ತುತ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಸಂಸ್ಥೆಯ ವಿವಿಧ ರಿಯಾಯತಿಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಪರೀಕ್ಷೆಗೆ 100 ಅಂಕದ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಯಿದ್ದು ಕನ್ನಡ ಹಾಗೂ ಆಂಗ್ಲ್ ಮಾಧ್ಯಮ ಭಾಷೆಯಲ್ಲಿರುತ್ತದೆ. ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಗಣಿತ ಹಾಗೂ ಇಂಗ್ಲೀಷ್ ವಿಷಯ ಒಳಗೊಂಡಿರುತ್ತದೆ. ವೈದ್ಯರು, ಇಂಜಿನಿಯರ್ ಆಗುವ ಕನಸು ಹೊಂದಿದ ಬಡ ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಹೆಚ್ಚಿನ ಮಾಹಿತಿಗೆ 6362499211, 9742091717 ಸಂಖ್ಯೆಗೆ ಸಂಪರ್ಕಿಸಬಹುದು.
Prev Post
Comments are closed.