Shubhashaya News

ಪ್ರತಿಯೊಂದು ಜೀವವೂ ಅಮೂಲ್ಯ-ಹಿರಿಯ ನ್ಯಾಯವಾದಿ ಶ್ರೀನಿವಾಸ ಬೋಸಗೆ

ಆಳಂದ ಪಟ್ಟಣದ ಎಂಎಆರ್‍ಜಿ ಕಾಲೇಜಿನಲ್ಲಿ ಜರುಗಿದ ರಸ್ತೆ ಸುರಕ್ಷತಾ ಜಾಗೃತಿಯನ್ನು ನ್ಯಾಯವಾದಿ ಶ್ರೀನಿವಾಸ ಭೋಸಗೆ ಉದ್ಘಾಟಿಸಿದರು.

 

ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಜೀವಗಳ ರಕ್ಷಣೆ ಹಾಗೂ ರಸ್ತೆ ಸುರಕ್ಷತೆಗಾಗಿ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹಿರಿಯ ನ್ಯಾಯವಾದಿ ಶ್ರೀನಿವಾಸ ಬೋಸಗೆ ಸಲಹೆ ನೀಡಿದರು.

ಮಂಗಳವಾರ ಆಳಂದ ಪಟ್ಟಣದ ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಜಾಗೃತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಸ್ತೆ ಸುರಕ್ಷತೆ ಎಂದರೆ ರಸ್ತೆಯಲ್ಲಿ ಸಂಚರಿಸುವ ಪ್ರತಿಯೊಬ್ಬರು ಸುರಕ್ಷತೆ ಕಾಪಾಡಿಕೊಳ್ಳುವುದೇ ಆಗಿದೆ. ವಾಹನಗಳು ಹೆಚ್ಚಾದಷ್ಟು ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ರಸ್ತೆ ಸುರಕ್ಷತಾ ಸಂಚಾರ ನಿಯಮಗಳನ್ನು ಪಾಲಿಸದಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ. ಕೆಲವರಿಗೆ ಸಂಚಾರಿ ನಿಯಮಗಳ ಅರಿವು ಇದ್ದರೂ ಪಾಲನೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಘಾತಗಳು ಅಕಸ್ಮಿಕವೇ ಹೊರತು ಉದ್ದೇಶಪೂರ್ವಕವಲ್ಲ. ಅಪಘಾತದಿಂದ ವ್ಯಕ್ತಿಯ ಕುಟುಂಬ ಬೀದಿಗೆ ಬರಲಿದೆ. ಈ ನಿಟ್ಟಿನಲ್ಲಿ ವಾಹನ ಚಾಲನೆ ಮಾಡುವ ಪ್ರತಿಯೊಬ್ಬರಿಗೂ ತಾಳ್ಮೆ ಹಾಗೂ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದರು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದನ್ವಯ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸಲು ಪ್ರತಿವರ್ಷ ಜನವರಿ ಮಾಹೆ ಅಂತ್ಯದವರೆಗೂ ವಿವಿಧ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ವಾಹನ ಚಾಲಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ, ವಿಮಾ ಪಾಲಿಸಿ, ವಾಹನ ನೊಂದಣಿ ಪತ್ರ, ವಾಯುಮಾಲಿನ್ಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಹಾಗೂ ಕಾರು ಚಾಲಕರು ಸೀಟ್ ಬೆಲ್ಟ್ ಧರಿಸಿರಬೇಕು ಎಂದು ಹೇಳಿದರು.

ನಿಗದಿತ ಮಿತಿಯಲ್ಲಿ ವಾಹನ ಚಾಲಿಸಬೇಕು. ಹೆದ್ದಾರಿಗಳಲ್ಲಿ ಇಂಡಿಕೇಟರ್ ಹಾಕಬೇಕು. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಬಾರದು. ಸಿಗ್ನಲ್ ಜಂಪ್ ಹಾಗೂ ತ್ರಿಬಲ್ ರೈಡಿಂಗ್ ಮಾಡಬಾರದು. ನೋ ಪಾಕಿರ್ಂಗ್ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬಾರದು. ರಸ್ತೆ ಅಪಘಾತಗಳನ್ನು ತಡೆಯಲು ಪ್ರಜ್ಞಾವಂತ ನಾಗರಿಕರು ಪೆÇಲೀಸರೊಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಶಿಕ್ಷಣ ಇಲಾಖೆಯ ಬಿಆರ್‍ಪಿ ಈಶ್ವರಿ ಚಿಕ್ಕಮಠ ಮಾತನಾಡಿ, ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಪರಿಣಾಮಕಾರಿ ತಡೆಗೆ ಸಾರಿಗೆ ಇಲಾಖೆ ವತಿಯಿದ ಪ್ರತಿವರ್ಷ ಜನವರಿ ತಿಂಗಳಿನಲ್ಲಿ ಶಾಲೆ, ಸಂತೆ, ಜಾತ್ರೆ, ರೈಲು ಹಾಗೂ ಬಸ್ ನಿಲ್ದಾಣದಂತಹ ಹೆಚ್ಚು ಜನಸಂದಣಿ ಇರುವ ಸ್ಥಳದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮಗಳ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಒಟ್ಟಿನಲ್ಲಿ ಆಳಂದ ತಾಲೂಕನ್ನು ಅಪಘಾತ ಮುಕ್ತವನ್ನಾಗಿಸಲು ಸಾರ್ವಜನಿಕರು ಸೇರಿದಂತೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

 

ಕಾಲೇಜು ಪ್ರಾಚಾರ್ಯ ಡಾ. ಅಪ್ಪಾಸಾಬ ಬಿರಾದಾರ ಅವರು, ಹಿಂದೆ ಪ್ರತಿ ಮನೆಗಳಲ್ಲಿ ಸೈಕಲ್‍ಗಳಿತ್ತು. ಬದಲಾದ ಇಂದಿನ ದಿನಗಳಲ್ಲಿ 2-3 ಸ್ಕೂಟರ್ ಹಾಗೂ ಕಾರುಗಳನ್ನು ಹೊಂದುವುದು ಜನರಿಗೆ ಸಾಮಾಜಿಕ ಪ್ರತಿμÉ್ಠಯಾಗಿದೆ. ವಾಹನಗಳು ಹೆಚ್ಚಾದಂತೆ ಅಪಘಾತಗಳು ಹೆಚ್ಚಾಗುವುದು ಸರ್ವೇ ಸಾಮಾನ್ಯವಾಗಿದೆ. ಅವಸರವೇ ಅಪಘಾತಕ್ಕೆ ಕಾರಣವಾಗಿದೆ. 18 ವರ್ಷದೊಳಗಿನ ಮಕ್ಕಳಿಗೆ ವಾಹನ ಚಲಾಯಿಸುವಂತೆ ಪೆÇೀಷಕರೇ ಪ್ರೇರೇಪಿಸುವಂತಹ ವಾತಾವರಣ ಸೃಷ್ಠಿಯಾಗಿದೆ. ಇದು ಸಲ್ಲದು. ರಸ್ತೆ ಸುರಕ್ಷತೆಗೆ ಅನೇಕ ಸಂಚಾರಿ ನಿಯಮಗಳಿದ್ದರೂ ಅವುಗಳ ಪಾಲನೆಯಾಗುತ್ತಿಲ್ಲ. ಇದು ದುರಂತವೇ ಸರಿ. ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ತಿಳಿಹೇಳಬೇಕು ಎಂದು ಹೇಳಿದರು.

Comments are closed.

Don`t copy text!