ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ನಸಿರ್ ಅಹಮದ್ ಹಾಗೂ ಎಂಎಲ್ಸಿ ಅಬ್ದುಲ್ ಜಬರ್ ಅವರ ವಿರುದ್ಧ ಪಕ್ಷ ಕಠಿಣವಾದ ಕ್ರಮ ತೆಗೆದುಕೊಂಡಿದೆ ಈ ವಿಚಾರವಾಗಿ ಮಾಜಿ ಸಚಿವ ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೇಸರ ಹೊರ ಹಾಕಿದ್ದಾರೆ.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಪಕ್ಷ ನಿಷ್ಠರ ವಿರುದ್ಧವೇ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳುತ್ತಿದೆ. ಸಿಎಂ ಸಿದ್ದರಾಮಯ್ಯ ಪರ ಇದ್ದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ವಿರುದ್ಧ ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಂದ ಇಂತಹ ಅಸಹಾಯಕತೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಯಾವ ಯೋಚನೆ ಇದೆಯೋ ನನಗೆ ಗೊತ್ತಿಲ್ಲ ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದರು.
Comments are closed.