Shubhashaya News

BREAKING : ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ : ಶಿವಲೀಲಾ ಕುಲಕರ್ಣಿ ಹೇಳಿಕೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯದ ತೀರ್ಪನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ ಎಂದು ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈ ಪ್ರಕರಣದಲ್ಲಿ ತಮ್ಮ ಪತಿ ವಿನಯ ಕುಲಕರ್ಣಿ ಅವರು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂಬ ಬಗ್ಗೆ ತಮಗೆ ದೃಢವಾದ ಆತ್ಮವಿಶ್ವಾಸವಿದೆ. 

ಪ್ರಸ್ತುತ ಹೊರಬಿದ್ದಿರುವ ತೀರ್ಪನ್ನು ಪ್ರಶ್ನಿಸಿ ನಾವು ಕೂಡಲೇ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದೇವೆ. ಉನ್ನತ ನ್ಯಾಯಾಲಯದಲ್ಲಿ ನಮಗೆ ಖಂಡಿತವಾಗಿಯೂ ನ್ಯಾಯ ಸಿಗಲಿದೆ ಎಂಬ ಅಚಲ ನಂಬಿಕೆ ಇದೆ ಎಂದು ಹೇಳಿದ್ದಾರೆ. ಈ ಕಠಿಣ ಸಮಯದಲ್ಲಿ ವಿನಯ್ ಅವರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅಥವಾ ಮುಖಂಡರುಧೃತಿಗೆಡಬಾರದು. ಸಂಯಮದಿಂದ ವರ್ತಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Comments are closed.

Don`t copy text!