Shubhashaya News

ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.!

 ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸಿಹಿಸುದ್ದಿ ನೀಡಿದೆ. ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ನಿಗಮವು ಅಧಿಕೃತ ಆದೇಶ ಹೊರಡಿಸಿದೆ.

ಪರೀಕ್ಷೆಗಳು ಪ್ರಾರಂಭವಾಗುವ ದಿನಾಂಕ 30.04.2026 ರಿಂದ 13.05.2026 ರವರೆಗೆ ಈ ಉಚಿತ ಪ್ರಯಾಣದ ಸೌಲಭ್ಯ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣಿಸುವಾಗ ತಮ್ಮ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು” (Hall Ticket) ತೋರಿಸುವುದು ಕಡ್ಡಾಯವಾಗಿದೆ.

ಯಾವ ಬಸ್‌ಗಳಲ್ಲಿ ಲಭ್ಯ?
ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ (Express) ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು.

ಕೋರಿಕೆ ನಿಲುಗಡೆ (Request Stop): ಬಸ್ಸುಗಳು ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಲ್ಲಿ ಬಸ್ಸನ್ನು ನಿಲ್ಲಿಸಲು (ಕೋರಿಕೆ ನಿಲುಗಡೆ) ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಅವರ ಸ್ವಂತ ವಿದ್ಯಾಸಂಸ್ಥೆಯ ಹೊರತಾಗಿ ಬೇರೆಡೆ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವುದರಿಂದ, ಅವರಿಗೆ ಪ್ರಯಾಣದ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೋರಿಕೆಯ ಮೇರೆಗೆ ಈ ಸೌಲಭ್ಯವನ್ನು ನೀಡಲಾಗಿದ್ದು, ಎಲ್ಲಾ ಚಾಲನಾ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಸಹಕರಿಸುವಂತೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

Comments are closed.

Don`t copy text!