ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ದೇಶದ ದಿಕ್ಸೂಚಿಯ ಸಂಕೇತವಾಗಿದೆ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಅಭಿಪ್ರಾಯಪಟ್ಟಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಫಲಿತಾಂಶವು ದೇಶದ ಜನತೆಯ ಗತಿ ತಿಳಿಸುತ್ತಿದೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಪಕ್ಷದ ನೆಲೆ ಮತ್ತಷ್ಟು ವಿಸ್ತಾರಗೊಂಡಿದೆ. ಈ ಫಲಿತಾಂಶವು ಬಿಜೆಪಿಯ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿದೆ. ದೇಶದ ಮತ್ತು ಚುನಾವಣೆ ನಡೆದ ರಾಜ್ಯದ ಜನತೆ ಭಾರತೀಯ ಜನತಾ ಪಕ್ಷ ಹಾಗೂ ಎನ್ಡಿಎ ಜೊತೆ ಇದ್ದಾರೆ ಎನ್ನುವುದು ಮತ್ತೊಮ್ಮೆ ಸಾಬಿತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವಕ್ಕೆ ಸಿಕ್ಕ ಮನ್ನಣೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.