ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಡಿ ಎನ್ ಜೀವರಾಜ್ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಹೈಕೋರ್ಟ್ ಮೇ 7ರವರೆಗೆಬಿಜೆಪಿಯ ಡಿಎನ್ ದೇವರಾಜ್ ಅವರ ವಿರುದ್ಧ ದಾಖಲಾದ ಎಫ್ಐಆರ್ ಗೆ ತಡೆಯಾಜ್ಜೆ ನೀಡಿತು.
170 ಮತಗಳನ್ನು ತಿದ್ದುಪಡಿಯಾಗಿದೆ ಎಂದು ಸುಧೀರ್ ಕುಮಾರ್ ಮುರಳಿ ದೂರು ನೀಡಿದ್ದರು. ದೂರು ಆಧರಿಸಿ ನಗರ ಠಾಣೆ ಪೊಲೀಸರು ದಾಖಲಿಸಿದ್ದರು. ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ಸಂಬಂಧಪಟ್ಟ ನ್ಯಾಯಮೂರ್ತಿಗಳು ಸೂಕ್ತ ಆದೇಶ ನೀಡುತ್ತಿದ್ದರು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ ಹೀಗಾದರೆ ಯಾವ ಅಧಿಕಾರಿಯು ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂದು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು.
Comments are closed.