Shubhashaya News

ರಾಜ್ಯ ಚುನಾವಣಾ ರಾಜಕೀಯಕ್ಕೆ ‘ಹಳ್ಳಿಹಕ್ಕಿ’ ಹೆಚ್. ವಿಶ್ವನಾಥ್ ನಿವೃತ್ತಿ ಘೋಷಣೆ

ಕರ್ನಾಟಕ ರಾಜಕೀಯದ ಹಿರಿಯ ಮುತ್ಸದ್ದಿ ಹಾಗೂ ‘ಹಳ್ಳಿಹಕ್ಕಿ’ ಎಂದೇ ಖ್ಯಾತರಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ದೀರ್ಘಕಾಲದ ರಾಜಕೀಯ ಪಯಣದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.ಮುಂಬರುವ ಯಾವುದೇ ರೀತಿಯ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಶ್ವನಾಥ್, ಈ ಮೂಲಕ ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯ ರಾಜಕಾರಣದ ವಿವಿಧ ಹಂತಗಳಲ್ಲಿ ಪ್ರಭಾವಶಾಲಿ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಈಗ ಚುನಾವಣಾ ಪಯಣಕ್ಕೆ ತೆರೆ ಎಳೆದಿದ್ದಾರೆ.

ನಿವೃತ್ತಿ ಘೋಷಣೆಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದರು. ಪೋಕ್ಸೋ ಪ್ರಕರಣ ಮತ್ತು ಈ ಸಮಯದಲ್ಲಿ ನಡೆಯುತ್ತಿರುವ ಸನ್ಮಾನಗಳು ರಾಜ್ಯದ ಘನತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ನಡೆಯನ್ನು ಟೀಕಿಸಿದ ಅವರು, “ಸ್ವತಃ ವಕೀಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲಾ ತಿಳಿಯುತ್ತಿಲ್ಲವೇ?” ಎಂದು ಕಿಡಿ ಕಾರಿದರು.

ಬಿಎಸ್‌ವೈ ಅವರ ‘ಅಭಿಮಾನೋತ್ಸವ’ ಆಚರಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, “ಪೋಕ್ಸೋ (POCSO) ನಂತಹ ಗಂಭೀರ ಪ್ರಕರಣದ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲಿ ಅಭಿಮಾನೋತ್ಸವ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.

Comments are closed.

Don`t copy text!