Shubhashaya News

2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!

ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. ಭೇಟಿ ಬಳಿಕ ಜಿ.ಟಿ.ದೇವೇಗೌಡ 2028ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಜಿಟಿಡಿ, ಜೆಡಿಎಲ್​ಪಿ ಸ್ಥಾನ ತಪ್ಪಿದ್ದಕ್ಕೆ ದೇವೇಗೌಡರ ಮೇಲೆ ಮುನಿಸಿಕೊಂಡಿದ್ದರು. ಈ ಹಿನ್ನೆಲೆ ಪಕ್ಷದ ಕಾರ್ಯಚಟುವಟಿಕೆಯಿಂದಲೂ ದೂರ ಉಳಿದಿದ್ದರು. ಈ ಮಧ್ಯೆ ಸಿಎಂ ಸಿದ್ದರಾಮಯ್ಯರನ್ನು ಶ್ಲಾಘಿಸಿ ನೀಡಿದ್ದ ಹೇಳಿಕೆಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಜಿ.ಟಿ.ದೇವೇಗೌಡರು ಕಾಂಗ್ರೆಸ್​ಗೆ ಸನಿಹವಾಗುತ್ತಿದ್ದಾರೆ ಎಂಬ ಚರ್ಚೆ ಕೂಡ ಬಲವಾಗಿ ಕೇಳಿ ಬಂದಿತ್ತು. ಆದರೆ, ಹೆಚ್.ಡಿ.ದೇವೇಗೌಡರ ಬೇಟಿ ಬಳಿಕ ಜಿ.ಟಿ.ದೇವೇಗೌಡರ ಹೇಳಿಕೆ ಹಲವು ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

ಅವರ ಈ ದಿಢೀರ್ ಭೇಟಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿತ್ತು. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು. ಬಹುದಿನಗಳ ಬಳಿಕ ದೇವೇಗೌಡರ ಭೇಟಿಯಾದ ಅವರ ನಡೆ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.

ಭೇಟಿ ಬಳಿಕ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿ ಮಾಡಿದೆ. ಇಡೀ ದೇಶದಲ್ಲಿ ಪ್ರಧಾನಿಯಾಗಿ ಪ್ರಖ್ಯಾತಿ ಪಡೆದವರು. ಮೋದಿಯವರೇ ಅವರ ಗುಣಗಾನ ಮಾಡಿದ್ದಾರೆ. ರೈತರ ಪರ ನಿಂತು ದುಡಿದವರು. ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗ್ತಿದ್ದಾರೆ. ಅವರ ಬಗ್ಗೆ ಅಪಾರ ಗೌರವ ಇದೆ. ತಾಯಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದೆ ಎಂದರು.

Comments are closed.

Don`t copy text!