Shubhashaya News

ರಾಜ್ಯದ ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಶಿಕ್ಷಕರ ಕೊರತೆ ನೀಗಿಸಲು ಕ್ರಮ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಮುಖ್ಯಮಂತ್ರಿಗಳು ಬಿಗಿ ಕ್ರಮಕ್ಕೆ ಮುಂದಾಗಿದ್ದಾರೆ. ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತಾದ ಪ್ರಸ್ತಾವನೆಯನ್ನು ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ. ಇದು ಮುಂಬರುವ ದಿನಗಳಲ್ಲಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸಹಕಾರಿಯಾಗಲಿದೆ. ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ಭರ್ತಿ ಪ್ರಕ್ರಿಯೆ ಕೂಡ ಆರಂಭವಾಗಲಿದೆ.

ಜೂನ್ 1 ರಂದು KPSC ಶಾಲೆಗೆ ಅಧಿಕೃತ ಚಾಲನೆ

ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಕೆಪಿಎಸ್ ಯೋಜನೆಗೆ ಚಾಲನೆ ಬರುವ ಜೂನ್ ಒಂದರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು.

ಈ ಯೋಜನೆಯಡಿ ಒಟ್ಟು 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಈ ಎಲ್ಲಾ 800 ಶಾಲೆಗಳು ಸಂಪೂರ್ಣ ಸೌಲಭ್ಯಗಳೊಂದಿಗೆ ಸಿದ್ಧವಾಗಬೇಕಿದೆ. ಈ ವಿಶೇಷ ಶಾಲೆಗಳಲ್ಲಿ ಎಲ್‌.ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ಸಿಗಲಿದ್ದು, ಪ್ರತಿ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ.

ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗುವಂತೆ ಈ ಕೆಪಿಎಸ್ ಶಾಲೆಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯನ್ನೂ ಸರ್ಕಾರ ಪರಿಶೀಲಿಸುತ್ತಿದೆ.

Leave A Reply

Your email address will not be published.