Shubhashaya News

ಹೀಗಿದೆ ಜಿ.ಪಂ, ತಾ.ಪಂ ಮೀಸಲಾತಿ ಸ್ಥಾನ

ಮುಂಬರಲಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಚುನಾವಣಾ ಆಯೋಗ ವರ್ಗವಾರು ಮೀಸಲಾತಿಯನ್ನು ಪ್ರಕಟ ಮಾಡಿದೆ.

ಈ ಕುರಿತು ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗೆ ಪ್ರತ್ಯೇಕವಾದ ಅಧಿಸೂಚನೆ ಹೊರಡಿಸಿದ್ದು,

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಒಟ್ಟು ಸ್ಥಾನಗಳಿಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಅಂದರೆ ಒಟ್ಟು ಸ್ಥಾನಗಳಲ್ಲಿ ಯಾವ ಯಾವ ವರ್ಗಗಳಿಗೆ ಎಷ್ಟು ಸ್ಥಾನಗಳು ಎಂಬುದನ್ನು ತಿಳಿಸಲಾಗಿದೆ . ಮುಂಬರುವ ಮೇ ತಿಂಗಳಿನಲ್ಲಿ ರಾಜ್ಯದ ಬಹುತೇಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಅವಧಿ ಮುಗಿಯಲಿದೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳು ಚುನಾವಣೆ ನಡೆಯಬೇಕಿತ್ತು. ಆದರೆ, ರಾಜ್ಯದಲ್ಲಿ ಕೊರೊನಾ ಸ್ಪೋಟವಾದ ಹಿನ್ನೆಲೆ ಮುಂದಿನ ಆರು ತಿಂಗಳವರೆಗೆ ಚುನಾವಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Comments are closed.

Don`t copy text!