Shubhashaya News

ಕರ್ನಾಟಕ, ಕೇರಳ ಕರಾವಳಿಗೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ

ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ.

ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave A Reply

Your email address will not be published.