Shubhashaya News

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಹರ್ಷಾ ಎಸ್. ಗುತ್ತೇದಾರ ಸಂತಾಪ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹರ್ಷಾ ಎಸ್. ಗುತ್ತೇದಾರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, “ಚೆನ್ನಮ್ಮ ದೇವೇಗೌಡ ಅವರು ಸರಳತೆ, ಸಾತ್ವಿಕತೆ ಹಾಗೂ ಕುಟುಂಬ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಆದರ್ಶ ಮಹಿಳೆಯಾಗಿದ್ದರು. ಮಾಜಿ ಪ್ರಧಾನಿ ದೇವೇಗೌಡ ಅವರ ಸಾರ್ವಜನಿಕ ಹಾಗೂ ರಾಜಕೀಯ ಜೀವನದ ಹಿಂದೆ ಅವರ ತ್ಯಾಗ, ಪ್ರೋತ್ಸಾಹ ಮತ್ತು ಬೆಂಬಲ ಮಹತ್ತರ ಪಾತ್ರ ವಹಿಸಿತ್ತು. ಅವರ ಅಗಲಿಕೆ ದೇವೇಗೌಡ ಕುಟುಂಬಕ್ಕೆ ಮಾತ್ರವಲ್ಲದೆ ರಾಜ್ಯದ ಸಾರ್ವಜನಿಕ ಜೀವನಕ್ಕೂ ತುಂಬಲಾರದ ನಷ್ಟವಾಗಿದೆ” ಎಂದು ತಿಳಿಸಿದ್ದಾರೆ.

ಅಗಲಿದ ಪುಣ್ಯಾತ್ಮೆಗೆ ಭಗವಂತನು ಚಿರಶಾಂತಿ ನೀಡಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಹರ್ಷಾ ಎಸ್. ಗುತ್ತೇದಾರ ಅವರು ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ದುಃಖದ ಈ ಸಂದರ್ಭದಲ್ಲಿ ದೇವೇಗೌಡ ಕುಟುಂಬದೊಂದಿಗೆ ತಾವು ಹಾಗೂ ಆಳಂದ ಕ್ಷೇತ್ರದ ಜನತೆ ನೈತಿಕವಾಗಿ ಜೊತೆಯಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.