ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಮತ್ತು ಖಾಸಗಿ ಶಾಲೆಗಳು ಕಡ್ಡಾಯವಾಗಿ ದತ್ತು ಪಡೆಯಬೇಕೆಂದು ರಾಜ್ಯದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಲಾಭಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಶಾಲೆಗಳನ್ನು ಗುತ್ತಿಗೆ ನೀಡುವುದೇ ಸಾರ್ವಜನಿಕ ಶಿಕ್ಷಣದ ಆಶಯಕ್ಕೆ ವಿರುದ್ಧವಾಗಿದೆ. ಇದು ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಖಾಸಗೀಯವರಿಗೆ ಹಸ್ತಾಂತರಿಸುವ ಹುನ್ನಾರವಾಗಿದೆ. ಸಾರ್ವಜನಿಕ ಶಿಕ್ಷಣವನ್ನು ಸಂಪೂರ್ಣವಾಗಿ ಲಾಭಕೋರ ಸಂಸ್ಥೆಗಳಿಗೆ ಹಸ್ತಾಂತರಿಸುವ ಸರ್ಕಾರದ ಈ ನಡೆಯನ್ನು ಎಐಡಿಎಸ್‌ಒ ತೀವ್ರವಾಗಿ ಖಂಡಿಸಿದೆ.
ಜನರ ತೇರಿಗೆ ಹಣದಿಂದ ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಅಭಿವೃದ್ಧಿ ಪಡಿಸಬೇಕು ಮತ್ತು ಈ ನಿಟ್ಟಿನಲ್ಲಿ ಸರ್ಕಾರದ ಬಜೆಟ್ಟಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಆದರೆ ಈ ಪ್ರಜಾತಾಂತ್ರಿಕ ಆಶಯಕ್ಕೆ ವಿರುದ್ಧವಾಗಿ ಸರ್ಕಾರವು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಸರ್ಕಾರಿ ಶಾಲೆಗಳನ್ನು ನೇರವಾಗಿ ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ಹೊರಟಿದೆ ಎಂದು ಆರೋಪಿಸಿದೆ
ಇದು ಸ್ಪಷ್ಟವಾಗಿ ಜನರಿಗೆ ಮಾಡಿದ ವಿಶ್ವಾಸ ದ್ರೋಹವಾಗಿದೆ. ಸರ್ಕಾರ ತನ್ನ ಈ ನಿರ್ಧಾರವನ್ನು ಕೈಬಿಡಬೇಕೆಂದು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿಯು ಆಗ್ರಹಿಸುತ್ತದೆ. ಹಾಗೂ ನಾಡಿನ ಜನತೆಯು ಸಂಘಟಿತರಾಗಿ ಸರ್ಕಾರದ ಈ ಷಡ್ಯಂತ್ರವನ್ನು ಸೋಲಿಸಬೇಕೆಂದು ನಾವು ಕರೆ ನೀಡುತ್ತೇವೆ ಎಂದು ತಿಳಿಸಿದೆ.