ಕೋವಿಡ್ 2ನೇ ಅಲೆ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕಣೆಯ ದೃಷ್ಟಿಯಿಂದ ಮೇ ತಿಂಗಳ ಪಡಿತರವನ್ನು ಬೆರಳಚ್ಚು ಪಡೆಯದೆ ವಿತರಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಇಲಾಖೆ ಆದೇಶ ಹೊರಡಿಸಿದೆ.
ಮೇ ತಿಂಗಳಲ್ಲಿ ಪಡಿತರ ವಿತರಣೆಗೆ ಸಂಬಂಧಪಟ್ಟಂತೆ ಕೆಲ ಪರ್ಯಾಯ ಅವಕಾಶಗಳನ್ನುನೀಡಿದೆ. ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಪಡೆದ ಓಟಿಪಿ ನೀಡಿ ಪಡಿತರ ಪಡೆಯಬಹುದು.
ವಯೋವೃದ್ಧರು, ಅನಾರೋಗ್ಯಪೀಡಿತರು, ವಿಕಲಚೇತನರಿಗೆ ವಿನಾಯ್ತಿ ಸೌಲಭ್ಯದಡಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಚೀಟಿದಾರರ ಪರಿಶೀಲನಾ ಪಟ್ಟಿ, ಕೈಬರಹಬಿಲ್ ಮೂಲಕವೂ ನೇರವಾಗಿ ಪಡಿತರ ವಿತರಿಸಲಾಗುತ್ತದೆ. ಪಡಿತರ ಪಡೆಯಲು ರಾಜ್ಯ ಹಾಗೂ ಹೊರರಾಜ್ಯದಪಡಿತರ ಚೀಟಿದಾರರಿಗೆ ಪೋರ್ಟೆಬಿಲಿಟಿ ಸೌಲಭ್ಯದಮೂಲಕ ಪಡಿತರ ವಿತರಿಸಲಾಗುತ್ತದೆ ಎಂದು ಇಲಾಖೆಆಯುಕರಾ¤ ದ ಡಾ.ಶಮ್ಲಾ ಇಕ್ಬಾಲ್ ತಿಳಿಸಿದ್ದಾರೆ.