Shubhashaya News

ಪೇಪರ್ ಸೋರಿಕೆ ಪ್ರಕರಣ:ಕರ್ನಾಟಕ ಭೀಮ್ ಸೇನೆ (ರಿ) ಪ್ರತಿಭಟನೆ

ಆಳಂದ: ಪಟ್ಟಣದ ಬಸ್ ನಿಲ್ದಾಣ ಮುಂದೆ ನೀಟ್ ಪ್ರಶ್ನೆ ಪತ್ರಿಕೆ ಸೂರಿಕೆ ವಿರುದ್ಧ ಕರ್ನಾಟಕ ಭೀಮಸೇನೆ ಕಲ್ಯಾಣ ಕರ್ನಾಟಕ ಪ್ರದೇಶ ಅಧ್ಯಕ್ಷ ಬಾಬುರಾವ್ ಅರುಣೋದಯ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡು ಬೇಡಿಕೆಗೆ ಒತ್ತಾಯಿದರು. ಮುಖಂಡ ರಮೇಶ ಲೋಹಾರ ಅವರು ಮಾತನಾಡಿ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕ ಭೀಮ್ ಸೇನೆ (ರಿ) ವತಿಯಿಂದ ಈ ಮನವಿಯನ್ನು ಪ್ರತಿಭಟನೆ ಮಾಡುವ ಮೂಲಕ ಅತ್ಯಂತ ಗೌರವಪೂರ್ವಕವಾಗಿ ಸಲ್ಲಿಸುತ್ತಿದ್ದೇವೆ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬAಧಿಸಿದ ಓಇಇಖಿ ಪರೀಕ್ಷೆಯ ಪೇಪರ್ ಸೋರಿಕೆ ಪ್ರಕರಣವು ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ನಂಬಿಕೆಗೆ ಧಕ್ಕೆಯುಂಟು ಮಾಡಿದೆ. ಈ ಪ್ರಕರಣದ ವಿರುದ್ಧ ನಿರಾಹಾರ ದೀಕ್ಷೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನು ವಾಂಗ್ಲುಕ್ ಅವರನ್ನು ಒತ್ತಾಯಪೂರ್ವಕವಾಗಿ ಎಳೆದೊಯ್ದು, ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿದ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ದಮನಕಾರಿ ಕ್ರಮವನ್ನು ಕರ್ನಾಟಕ ಭೀಮ್ ಸೇನೆ (ರಿ) ತೀವ್ರವಾಗಿ ಖಂಡಿಸುತ್ತದೆ.

ಆದ್ದರಿAದ ಈ ಕೆಳಕಂಡ ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮ ಮೂಲಕ ಕೇಂದ್ರ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ವಿನಂತಿಸುತ್ತೇವೆ.
ನೀಟ್ ಪೇಪರ್ ಸೋರಿಕೆ ಪ್ರಕರಣದಿಂದ ಮಾನಸಿಕ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ೫ ಕೋಟಿ ರೂಪಾಯಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು.
ನೀಟ್ ಪೇಪರ್ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು.
ನೀಟ್ ಪೇಪರ್ ಸೋರಿಕೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ಸಮಯಬದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಪ್ರತಿಭಟನಾನಿರತ ವಿದ್ಯಾರ್ಥಿಗಳು ಮತ್ತು ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಹಾಗೂ ಆಶ್ರುವಾಯು ಸಿಡಿಸಲು ಆದೇಶ ನೀಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.
ಭವಿಷ್ಯದಲ್ಲಿ ಯಾವುದೇ ರಾಷ್ಟಿçÃಯ ಮಟ್ಟದ ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆಯಾಗದಂತೆ ಪಾರದರ್ಶಕ, ಸುರಕ್ಷಿತ ಮತ್ತು ಜವಾಬ್ದಾರಿಯುತ ಪರೀಕ್ಷಾ ವ್ಯವಸ್ಥೆ ಜಾರಿಗೆ ತಂದು, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸುವ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು.
ತಾವು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ವಿಶ್ವಾಸವನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಭೀಮ್ ಸೇನೆ ಸಂಘಟನೆ ಪ್ರತಿಭಟನೆ ಮೂಲಕ ವಿನಂತಿಸುತ್ತೇವೆ.

Leave A Reply

Your email address will not be published.