Shubhashaya News

ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಮೈಸೂರಿನ ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ ಸಮಾನಾಂತರ ಕೋರ್ಸ್‍ಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮೈಸೂರು ಸಿದ್ದಾರ್ಥ ನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ]

ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ “ಸಿಬಿಸಿಎಸ್” (CBCS), , ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ (Painting), ಶಿಲ್ಪಕಲೆ (Sculpture) ಮತ್ತು ಅಚ್ಚುಕಲೆ (Graphics) ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2026ರ ಜುಲೈ 31 ರಂದು ಕೊನೆಯ ದಿನವಾಗಿದೆ. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಯ್ಕೆಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವು 2026ರ ಆಗಸ್ಟ್ 3 ರಂದು ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಮೂಲಕ ಕಛೇರಿ ಅವಧಿಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

Leave A Reply

Your email address will not be published.