2026-27ನೇ ಸಾಲಿನ ಕ್ರೀಡಾ ಕಲ್ಯಾಣ ಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಅಧೀಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು 2025-26ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ, ಜೀವಮಾನ ಸಾಧನೆ ಪ್ರಶಸ್ತಿಗಾಗಿ ಪ್ರೋತ್ಸಾಹಧನ, ಏಕಲವ್ಯ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೆÇೀಷಕ ಪ್ರಶಸ್ತಿ, ವಿದ್ಯಾರ್ಥಿವೇತನ, ನಗದು ಪುರಸ್ಕಾರ ಯೋಜನೆಯಡಿ ಪ್ರೋತ್ಸಾಹಧನ, ಗುರಿ ಒಲಂಪಿಕ ಯೋಜನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಕ್ರೀಡಾಪಟುಗಳು/ ಕ್ರೀಡಾ ಸಾಧಕರು/ಕ್ರೀಡಾ ಪೆÇೀಷಕರು ಕಡ್ಡಾಯವಾಗಿ 2026ರ ಜುಲೈ 31ರೊಳಗಾಗಿ https://sevasindu.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಕ್ರೀಡಾಪಟುಗಳು/ ಕ್ರೀಡಾ ಸಾಧಕರು/ ಕ್ರೀಡಾ ಪೆÇೀಷಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಜನ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಹಾಯವಾಣಿ 155265 ಗೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಲು ಕೋರಲಾಗಿದೆ.