ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ಆದೇಶ ಹೊರಡಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮಕ್ಕೆ ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ತಮಿಳುನಾಡಿನಲ್ಲಿ ಕಾವೇರಿ ನೀರು ಹೆಚ್ಚಾಗಿ ಸಮುದ್ರಕ್ಕೆ ಹೋಗುತ್ತಿರುವುದನ್ನು ವಿಡೀಯೋ ಸಮೇತ ಸೆರೆ ಹಿಡಿದು ಅಲ್ಲಿ ಇಂತಹ ಪರಿಸ್ಥಿತಿ ಇರುವಾಗ ಮತ್ತೆ ನೀರು ಬಿಡುವಂತೆ ಆದೇಶಿಸಿರುವುದು ಸರಿಯಲ್ಲ ಎಂದು ಈ ಕ್ರಮವನ್ನು ಕರವೇ(ಪ್ರವೀಣ ಶೆಟ್ಟಿ) ಬಣವು ತೀವ್ರವಾಗಿ ಖಂಡಿಸುತ್ತದೆ ಎಂದರು. ಯಾವುದೇ ಕಾರಣಕ್ಕೂ ನೀರು ಬಿಡದೆ ಇರಲು ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.ಈ ಹಿಂದೆಯೂ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಮತ್ತು ಬಂಗಾರಪ್ಪ ಅವರು ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಕಾವೇರಿ ನೀರಿನ ಸಂಬಂಧ ತೀವ್ರ ಪ್ರತಿಭಟನೆ ಹೆಚ್ಚಾಗಿತ್ತು ದೇವೆಗೌಡರು ತಮ್ಮ ಅಧಿಕಾರಾವಧಿಯಲ್ಲಿ ಇಂತಹ ಪರಿಸ್ಥಿತಿಯನ್ನು ಬಹಳ ನಾಜೂಕ್ಕಾಗಿ ನಿಭಾಯಿಸಿದ್ದರು. ಇಂತಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಆದಷ್ಟೂ ಶೀಘ್ರ ಬಗೆಹರಿಸಬೇಕು.ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದ್ದು, ರಾಜ್ಯದಲ್ಲಿ ಈ ವೇಳೆಗಾಗಲೇ ಶೇಕಡಾ 70 ರಷ್ಟು ಮಳೆಯಾಗಬೇಕಿತ್ತು, ಬದಲಾಗಿ ಕೇವಲ ಶೇಕಡಾ 20 ರಷ್ಟು ಮಾತ್ರ ಮಳೆಯಾಗಿದೆ. ತೀವ್ರ ಮುಂಗಾರು ಮಳೆಯ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.