ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಾದ್ಯಂತ ರವಿವಾರದ ಅಂತ್ಯಕ್ಕೆ ಒಟ್ಟು 23,71,542 ಮತದಾರರ ಪೈಕಿ 18,28,719 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.
ಬಿ.ಎಲ್.ಓ. ಗಳು ಮನೆ-ಮನೆ ಭೇಟಿ ಕೊಟ್ಟಾಗ ಇಲ್ಲಿಯವರೆಗೆ 71,429 ಜನ ಮತದಾರರು ನಿಧನ ಹೊಂದಿರುವ ಬಗ್ಗೆ, 50,368 ಮತದಾರರು ಮನೆಯಲ್ಲಿ ಇಲ್ಲದಿರುವ (ಗೈರು), 3,38,160 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು, ಇತರೆ 23,350 ಹಾಗೂ 32,158 ಮತದಾರರು ಈಗಾಗಲೆ ನೋಂದಣಿಯಾಗಿರುವ ಬಗ್ಗೆ ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ.