Shubhashaya News

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕಲಾ ಪ್ರದರ್ಶನ: ಸಮೂಹ ನೃತ್ಯ ಕಲಾ ತಂಡಗಳಿಂದ ಅರ್ಜಿ ಆಹ್ವಾನ

ಕಲಬುರಗಿ: ಆಗಸ್ಟ್ 15 ರಂದು ಕಲಬುರಗಿ ಜಿಲ್ಲಾಡಳಿತದಿಂದ ಕಲಬುರಗಿಯ ಡಿ.ಎ.ಆರ್. ಪೊಲೀಸ್ ಮೈದಾನದಲ್ಲಿ ಅಯೋಜಿಸಲಾಗುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಸ್ಥಳೀಯ ಕಲೆಯನ್ನು ಪ್ರದರ್ಶಿಸಲು ಆಸಕ್ತಿವುಳ್ಳ ಕಲಾ ತಂಡಗಳು ಮತ್ತು ಸಮೂಹ ನೃತ್ಯ ತಂಡಗಳಿಂದ‌ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕಲಾ ತಂಡಗಳು ಇದೇ ಆಗಸ್ಟ್ 8ರ ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ಅ.‌ನಾಶಿ ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯವಾಗಿ ದೇಶಭಕ್ತಿ ಗೀತೆಗಳ ಗಾಯನ, ನೃತ್ಯ ಮತ್ತು ನಮ್ಮ ನಾಡು, ನುಡಿ, ಕಲೆ, ಸಂಸ್ಕೃತಿಯನ್ನು ಬಿಂಬಿಸುವ ವಿಶೇಷ ಹಾಗೂ ವಿಶಿಷ್ಟ ಕಲೆಗಳನ್ನು ಪ್ರದರ್ಶಿಸಲು ಅವಕಾಶವಿದೆ. ಸಮೂಹ ಕಲಾ ಪ್ರದರ್ಶನಗಳಿಗೆ ಇಲ್ಲಿ ಆದ್ಯತೆ ನೀಡಲಾಗುವುದು.

ಅರ್ಜಿ‌ ಸಲ್ಲಿಸಿದ ಕಲಾ ತಂಡಗಳು ಇದೇ ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ರಂಗಾಯಣ‌ ಸಭಾಂಗಣದಲ್ಲಿ ಆಯ್ಕೆ‌ ಸಮಿತಿ ಮುಂದೆ ಕಲೆಗಳ ಪ್ರದರ್ಶನದ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಅಯ್ಕೆ‌ ಸಮಿತಿ ಅಂತಿಮಗೊಳಿಸಿದ ಕಲಾ‌ ತಂಡಗಳು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ‌ ಕಲಾ ಪ್ರದರ್ಶನ‌ ನೀಡಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ.08472-227734ಕ್ಕೆ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.