Shubhashaya News

ಕಠಿಣ ಪರಿಶ್ರಮ, ಶಿಸ್ತು, ನಿರಂತರ ಅಭ್ಯಾಸದಿಂದ ಯಶಸ್ಸು ಸಾಧ್ಯ: ದೇವಣ್ಣಗೌಡ ಪಾಟೀಲ

ಕಲಬುರಗಿ: ನಗರದ ಜಿಲಾನಾಬಾದ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೇವಣ್ಣಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನ ಗಮನ ಹರಿಸಬೇಕು. ಕಠಿಣ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಭ್ಯಾಸದಿಂದ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಪ್ರತಿಭೆ ಮತ್ತು ಪರಿಶ್ರಮದ ಮೂಲಕವೇ ಗುರಿ ತಲುಪುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. “ಈ ದೇಶದ ನಿಜವಾದ ಸಂಪತ್ತು ವಿದ್ಯಾರ್ಥಿಗಳೇ ಆಗಿದ್ದಾರೆ. ಅವರು ಉತ್ತಮ ಶಿಕ್ಷಣದೊಂದಿಗೆ ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದಾರೆ” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶೇಖ್ ಸಮ್ರೀನ್, ನರಸಪ್ಪ ರಂಗೋಲಿ, ಶಿವಾನಂದ ಬಿರಾದಾರ, ಖಾದರ್ ಬೇಗ್, ಧರ್ಮರಾಜ ಜವಳಿ, ನಾಗರಾಜ ಮೈಲ್ವಾರ, ಸುಭಾಷ್ಚಂದ್ರ ಹಾಗೂ ಸುನೀಲ ರಾಠೋಡ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ದಶರಥ ರಾಠೋಡ ವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಉಪನ್ಯಾಸಕರಾದ ಮಹೇಶ ದೇಶಪಾಂಡೆ ದಂಪತಿ ಹಾಗೂ ರಾಜಶೇಖರ ಮಿಣಜಿಗಿ ದಂಪತಿ ಅವರನ್ನು ಕಾಲೇಜಿನ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಅವರ ಶೈಕ್ಷಣಿಕ ಸೇವೆಯನ್ನು ಸ್ಮರಿಸಲಾಯಿತು.

ಉಪನ್ಯಾಸಕರಾದ ರಮೇಶ ಮಾಡಿಯ್ಯಾಳಕರ, ಡಾ. ವಿಶ್ವನಾಥ ಹೊಸಮನಿ, ಸೋಮಶೇಖರ ಚವ್ಹಾಣ, ನೀಲಮ್ಮಾ ಪಾಟೀಲ, ರೇಷ್ಮಾ ಖಾತೂನ್, ಜಮುನಾ ಟಿಳೆ, ಸುಜಾತ ರೆಡ್ಡಿ, ಡಾ. ಆತಿಯಾ ಸುಲ್ತಾನ, ಇಂದುಕಲಾ, ಸಂಗೀತಾ ಬುಳ್ಳಾ ಹಾಗೂ ಸಿಬ್ಬಂದಿಗಳಾದ ದೇವೇಂದ್ರ ನೇಲೂಗಿ, ರೇಖಾ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave A Reply

Your email address will not be published.