Shubhashaya News

ಬರಗಾಲ ಘೋಷಣೆಗೆ ಆಗ್ರಹಿಸಿ ಆಳಂದದಲ್ಲಿ ಎಸ್‌ಕೆಎಂ ಪ್ರತಿಭಟನೆ

ರೈತರ ಸಂಕಷ್ಟಕ್ಕೆ ತುರ್ತು ಪರಿಹಾರಕ್ಕೆ ಸರ್ಕಾರಗಳಿಗೆ ಮನವಿ

ಆಳಂದ: ತಾಲೂಕು ಆಡಳಿತಸೌಧ ಎದುರು ಸಂಯುಕ್ತ ಕಿಸಾನ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮೂಲಕ ಬೇಡಿಕೆಗೆ ಒತ್ತಾಯಿಸಿ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಆಳಂದ: ಎಲ್‌ನಿನೊ ಪರಿಣಾಮದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲದ ಛಾಯೆ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಮಗ್ರ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ನೇತೃತ್ವದಲ್ಲಿ ಬುಧವಾರ ಆಳಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ರೈತಪರ ನೀತಿ ಜಾರಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದ ಪರಿಣಾಮ ಅಲ್ಪಾವಧಿಯ ಬೆಳೆಗಳು ಹಾನಿಯಾಗಿವೆ. ತೊಗರಿ, ಸೋಯಾಬೀನ್, ಹತ್ತಿ ಹಾಗೂ ಕಬ್ಬು ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಅಂತರ್ಜಲ ಕುಸಿದಿರುವುದರಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದ್ದು, ಜಾನುವಾರುಗಳಿಗೆ ಮೇವು ಕೊರತೆ ಉಂಟಾಗಿದೆ. ಉದ್ಯೋಗ ಇಲ್ಲದೆ ಗ್ರಾಮಗಳಿಂದ ಜನರು ಪಟ್ಟಣಗಳತ್ತ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಲದ ಒತ್ತಡದಿಂದ ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಸರ್ಕಾರ ತಕ್ಷಣ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ಮಹಾರಾಷ್ಟçದ ಪುಣೆ ಜಿಲ್ಲೆಯ ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ ೧೫ ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಹಾಗೂ ಬೆಳೆ ಕಟಾವು ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರ ಸಂಕಷ್ಟವನ್ನು ರಾಜಕೀಯ ವಿಚಾರವನ್ನಾಗಿ ಮಾಡದೆ ಕೇಂದ್ರ ತಂಡವನ್ನು ಕಳುಹಿಸಿ ಬರ ಅಧ್ಯಯನ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯ ಬಳಿಕ ತಹಸೀಲ್ದಾರ್ ಮೂಲಕ ರಾಷ್ಟçಪತಿಗಳು ಸೇರಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಿಂಗಾರು ಮರುಬಿತ್ತನೆಗೆ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ವಿತರಿಸಬೇಕು. ರಾಷ್ಟಿçÃಕೃತ ಬ್ಯಾಂಕುಗಳ ಕೃಷಿ ಸಾಲ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಿ, ಸಾಲ ಮನ್ನಾ, ಪ್ರತಿ ಎಕರೆಗೆ ೩೦ ಸಾವಿರ ಬರ ಪರಿಹಾರ, ಒಣಗಿದ ಕಬ್ಬು ಬೆಳೆಗೆ ಪ್ರತಿ ಎಕರೆಗೆ ೫೦ ಸಾವಿರ ಪರಿಹಾರ ನೀಡಬೇಕು. ಬಾಕಿ ಉಳಿದಿರುವ ಬೆಳೆ ವಿಮೆ ಹಾಗೂ ಬೆಳೆ ಕಟಾವು ಪರಿಹಾರ ಹಣವನ್ನು ನೀಡಬೇಕು. ಮಹಾರಾಷ್ಟçದ ಉಜನಿ ಅಣೆಕಟ್ಟಿನಿಂದ ಕರ್ನಾಟಕದ ಪಾಲಿನ ೧೫ ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸಬೇಕು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಬೇಕು. ದನಕರುಗಳಿಗೆ ಗೋಶಾಲೆ ತೆರೆಯುವ ಮೂಲಕ ಮೇವು ಬರಗಾಲ ಕಾಮಗಾರಿ ಆರಂಭಿಸಿ ಉದ್ಯೋಗ ಕಲ್ಪಿಸಬೇಕು.
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ಮಾಸಾಶನದ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬೆಳೆ ವಿಮೆ ಮಂಜೂರಾತಿಗೆ ಬ್ಯಾಂಕ್ ಸಾಲದ ದೃಢೀಕರಣವನ್ನು ಕಡ್ಡಾಯಗೊಳಿಸುವ ಕ್ರಮವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಮೋರ್ಚಾದ ಜಿಲ್ಲಾ ಮುಖಂಡ ಭೀಮಾಶಂಕರ ಮಾಡಿಯಾಳ, ಕಿಸಾನಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಅಧ್ಯಕ್ಷ ಧರ್ಮಣ್ಣಾ ಪೂಜಾರಿ, ಗೌರವ ಅಧ್ಯಕ್ಷ ಚಂದ್ರಕಾAತ ಖೋಬ್ರೆ, ಕಾನೂನು ಸಲಹೆಗಾರ ಪಂಡಿತ್ ಸಲಗರ, ಕಲ್ಯಾಣಿ ಅವುಟೆ, ಮಹಾದೇವ ಪೂಜಾರಿ, ಹಿರಿಯ ಪ್ರಕಾಶ ಜಾನೆ, ಉಮಾವತಿ ಪಾಟೀಲ ಅನೇಕರು ಭಾಗವಹಿಸಿದ್ದರು.

Leave A Reply

Your email address will not be published.