Shubhashaya News

ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮುಂದೂಡಲಾಗಿದೆ.

ಈ ಕುರಿತು ಪ್ರಾದೇಶಿಕ ಆಯುಕ್ತೆ ಜಹೀರಾ ನಶೀಮ್ ಅವರು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ಪಾಲಿಕೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಯ ಮೇರೆಗೆ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಆಗಸ್ಟ್‌ 7ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಸಂಬಂಧ ಜುಲೈ 20ರಂದು ಪಾಲಿಕೆಯ ಎಲ್ಲ ಸದಸ್ಯರಿಗೆ ಚುನಾವಣಾ ಸಭೆಯ ತಿಳುವಳಿಕೆ ನೋಟಿಸ್ ಜಾರಿಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ, ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ 200778/2026ರಲ್ಲಿ ಈ ಪ್ರಾಧಿಕಾರದ ಮಧ್ಯಂತರ ಅರ್ಜಿಯನ್ನು ಅಂಗೀಕರಿಸಿ, ಚುನಾವಣೆಯನ್ನು ಮುಂದೂಡಲು ಸಹಮತಿಸಿ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್‌ 7ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದೂಡಲ್ಪಟ್ಟ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಇದೇ ಆಗಸ್ಟ್‌ 29ರಂದು ನಡೆಸಲಾಗುವುದು ಎಂದು ಪ್ರಾದೇಶಿಕ ಆಯುಕ್ತೆ ಜಹೀರಾ ನಶೀಮ್ ತಿಳಿಸಿದ್ದಾರೆ.

Leave A Reply

Your email address will not be published.