Shubhashaya News

ತಾ.ಪಂ. ಕಚೇರಿ ಮುಂದೆ ದಲಿತ ಸೇನೆಯಿಂದ ಬೃಹತ್ ಪ್ರತಿಭಟನೆ

ಚಿತಲಿ ಗ್ರಾಮದಲ್ಲಿ ನಕಲಿ ಬಿಲ್ ಸೃಷ್ಟಿಸಿ ಹಣ ದುರುಪಯೋಗ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಳಂದ: ಕಿಣ್ಣಿಸುಲ್ತಾನ ಗ್ರಾಪಂನಲ್ಲಿ ನಕಲಿ ಬಿಲ್ ಸೃಷ್ಟಿಸಿ ಹಣ ಎತ್ತಿಹಾಕಿದ ವಿರುದ್ಧ ದಲಿತ ಸೇನೆ ಅಧ್ಯಕ್ಷ ಪಿಂಟು ಸಾಲೇಗಾಂವ ನೇತೃತ್ವದಲ್ಲಿ ಕಾರ್ಯಕರ್ತರು ತಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಇಒ ಮಾನಪ್ಪ ಕಟ್ಟಿಮನಿ ಅವರಿಗೆ ಮನವಿ ಸಲ್ಲಿಸಿದರು.

ಆಳಂದ: ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತ ವ್ಯಾಪ್ತಿಯ ಚಿತಲಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯಡಿ (ಎಂಜಿಎನ್‌ಆರ್‌ಇಜಿಎ) ಮಂಜೂರಾಗಿದ್ದ ಸಿ.ಸಿ. ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ದಲಿತ ಸೇನೆ ತಾಲೂಕು ಅಧ್ಯಕ್ಷ ಪಿಂಟು ಎಸ್. ಸಾಲೇಗಾಂವ ನೇತೃತ್ವದಲ್ಲಿ ತಾಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
೨೦೨೪-೨೫ನೇ ಸಾಲಿನಲ್ಲಿ ಚಿತಲಿ ಗ್ರಾಮದ ಭಾಗ್ಯವಂತಿ ಗುಡಿಯಿಂದ ಕೋಳಿ ಸಮಾಜದ ಸಮುದಾಯ ಭವನದವರೆಗೆ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ದೊರೆತಿತ್ತು. ಆದರೆ ಕಾಮಗಾರಿಯನ್ನೇ ಕೈಗೊಳ್ಳದೆ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಬೋಗಸ್ ಬಿಲ್ ಸೃಷ್ಟಿಸಿ ೧,೩೯,೦೦೦ ಹಣವನ್ನು ಎತ್ತಿ ಹಾಕಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಬೋಗಸ್ ಬಿಲ್ ಸೃಷ್ಟಿಸಿದ ಪಿಡಿಒ ಹಾಗೂ ಜೆಇ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಸಂಬAಧಿಸಿದ ಗುತ್ತಿಗೆದಾರರ ಲೈಸನ್ಸ್ ಅನ್ನು ಕಪ್ಪುಪಟ್ಟಿಗೆ ಸೇರಿಸಬೇಕು.ಅವ್ಯವಹಾರದ ಹಣವನ್ನು ಸರ್ಕಾರಕ್ಕೆ ಮರಳಿ ಜಮಾ ಮಾಡಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.
ದಲಿತ ಸೇನೆ ತಾಲೂಕು ಅಧ್ಯಕ್ಷ ಪಿಂಟು ಎಸ್. ಸಾಲೇಗಾಂವ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕಾಮಗಾರಿಯ ಕ್ರಿಯಾ ಯೋಜನೆ, ಅಂದಾಜುಪಟ್ಟಿ, ದೃಢೀಕರಣ ಪ್ರತಿ ಹಾಗೂ ಕಾಮಗಾರಿ ನಡೆಯದಿದ್ದರೂ ಸಲ್ಲಿಸಲಾಗಿದ್ದ ಬೋಗಸ್ ಜಿಪಿಎಸ್ ಫೋಟೋಗಳನ್ನು ಪುರಾವೆಯಾಗಿ ಲಗತ್ತಿಸಲಾಗಿತ್ತು.
ಗ್ರಾಮ ಪಂಚಾಯತಿಗೆ ಸರ್ಕಾರ ಪ್ರತಿ ವರ್ಷ ಲಕ್ಷಾಂತರ ರೂಪಾಯಿ ವೆಚ್ಚ ಮಾಡುತ್ತಿದ್ದರೂ ಕಾಮಗಾರಿ ಮಾತ್ರ ಶೂನ್ಯವಾಗಿದ್ದು, ಮೂಲಭೂತ ಸೌಕರ್ಯಗಳಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಯುವ ಘಟಕ ಸಂಘಟನಾ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯಾಧ್ಯಕ್ಷರು, ಉಪಾಧ್ಯಕ್ಷರಾದ ಶಿವಲಿಂಗಪ್ಪ ಚನ್ನಗುಂಡ, ಶಶಿಕಾಂತ ಕವಲಗಾ, ವಿ.ಓ. ಅಧ್ಯಕ್ಷ ಗೌತಮ ಪದಾರ, ಯು.ಘ. ಅಧ್ಯಕ್ಷ ಯೂಸುಫ್ ಅನ್ಸಾರಿ, ವಲಯ ಅಧ್ಯಕ್ಷರಾದ ರಾಘವೇಂದ್ರ ಹೆಬಳಿ, ದೇವಾ.ಕ.ದೊಡಮನಿ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

Leave A Reply

Your email address will not be published.