Shubhashaya News

ಶಾಸಕ ಅಲ್ಲಮಪ್ರಭು ಪಾಟೀಲ ಅವರಿಗೆ ಕ್ಯಾಬಿನೆಟ್ ದರ್ಜೆಯಲ್ಲಿ ಸೂಕ್ತ ಸ್ಥಾನ ನೀಡಲು ಮನವಿ

ಕಲಬುರ್ಗಿ: ದಕ್ಷಿಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಅಲ್ಲಂಪ್ರಭು ಪಾಟೀಲ ಅವರಿಗೆ ಕರ್ನಾಟಕ ರಾಜ್ಯದ ನಿಗಮ ಮಂಡಳಿ ಕ್ಯಾಬಿನೆಟ್ ದರ್ಜೆಯಲ್ಲಿ ಸೂಕ್ತ ಸ್ಥಾನವನ್ನು‌ ನೀಡಬೇಕು ಎಂದು ದಕ್ಷಿಣ ಮತಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈದಪ ಎಸ್ ಡಾಂಗೆ ಅವರು ಮುಖ್ಯಮಂತ್ರಿ ಡಿ.ಕೆ ಶಿವುಕುಮಾರ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
‌ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,
ಸುಮಾರು 4 ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ದುಡಿದ ಇವರು, ಗ್ರಾಮ ಪಂಚಾಯತ ಇಂದ ಜಿಲ್ಲಾ ಪಂಚಾಯತ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಮತ್ತು ವಿಧಾನ ಸಭೆ ಸದಸ್ಯರಾಗಿ ಪ್ರಸ್ತುತ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸುತ್ತಿರುವ ಅವರು ಒಂದೇ ಪಕ್ಷದಲಿ ಇದ್ದು ಪಕ್ಷದಲ್ಲಿ ನೀಡಿದ ಕೆಲಸವೂ ಅಚ್ಚು ಕಟ್ಟಾಗಿ ನಿಭಾಯಿಸುತ್ತಿದ್ದಾರೆ.
ಕಲಬುರ್ಗಿ ಜಿಲ್ಲೆಯಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ.ಕಾಂಗ್ರೆಸ್ ಹೈಕಮಾಂಡ ಜೊತೆಗೆ ಒಳ್ಳೆಯ ಒಡನಾಟ ಹೊಂದಿರುತ್ತಾರೆ.ಇವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಆಗಿ ಕೂಡ ಕೆಲಸ ಮಾಡಿದ್ದಾರೆ.ಇಂತ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಯಾಬಿನೆಟನಲ್ಲಿ ಸೂಕ್ತ ಸ್ಥಾನಮಾನ ನೀಡಿದ್ದರೆ ಪಕ್ಷಕೆ ಕೂಡ ಅನುಕೂಲವಾಗಲಿದೆ ಎಂದರು.ಹಿರಿಯ ನಾಯಕರು ಕಾಂಗ್ರೆಸ ಪಕ್ಷದ ಕಟ್ಟಾಳು ಪ್ರಸ್ತುತ ಶಾಸಕರು ಆಗಿ ಪಕ್ಷದ ಸಲುವಾಗಿ ಕೆಲಸ ಮಾಡುತ್ತಿರುವ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಯಾಬಿನೆಟ್ ದರ್ಜೆಯಲ್ಲಿ ಸೂಕ್ತ ಸ್ಥಾನಮಾನ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ,ಉಪ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

Leave A Reply

Your email address will not be published.