ಎಸ್‍ಆರ್‍ಜಿ ಫೌಂಡೇಶನ್‍ನಿಂದ 15 ಆಕ್ಸಿಜನ್ ಸಿಲಿಂಡರ್ ದೇಣಿಗೆ
ಕಿಕ್ಕರ್: ಶಾಸಕ ಸುಭಾಷ್ ಆರ್ ಗುತ್ತೇದಾರ ಜನ್ಮ ದಿನದ ಪ್ರಯುಕ್ತ
ಸುಭಾಷ್ ಆರ್ ಗುತ್ತೇದಾರ ಅವರ ಜನ್ಮ ದಿನದ ಅಂಗವಾಗಿ ಪಟ್ಟಣದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಎಸ್‍ಆರ್‍ಜಿ ಫೌಂಡೇಶನ್ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಆಕ್ಸಿಜನ್ ಸಿಲಿಂಡರಗಳನ್ನು ದೇಣಿಗೆಯಾಗಿ ನೀಡಲಾಯಿತು. ಸಚಿವ ಮುರುಗೇಶ ನಿರಾಣಿ, ಸಂಸದರಾದ ಭಗವಂತ ಖುಬಾ, ಡಾ. ಉಮೇಶ ಜಾಧವ, ಶಾಸಕ ಸುಭಾಷ್ ಆರ್ ಗುತ್ತೇದಾರ ಇದ್ದರು.
ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರ ಜನ್ಮ ದಿನದ ಅಂಗವಾಗಿ ಪಟ್ಟಣದ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಎಸ್‍ಆರ್‍ಜಿ ಫೌಂಡೇಶನ್ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 15 ಆಕ್ಸಿಜನ್ ಸಿಲಿಂಡರಗಳನ್ನು ದೇಣಿಗೆಯಾಗಿ ನೀಡಲಾಯಿತು.
ಮಂಗಳವಾರ ಆಳಂದ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿಯವರ ಸಮ್ಮುಖದಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಮತ್ತು ಅವರ ಬೆಂಬಲಿಗರು ಆಕ್ಸಿಜನ್ ಸಿಲಿಂಡರಗಳನ್ನು ಆಸ್ಪತ್ರೆಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಕೋರೋನಾ ಗ್ರಾಮೀಣ ಭಾಗಕ್ಕೆ ವ್ಯಾಪಕವಾಗಿ ವಿಸ್ತರಿಸುತ್ತಿರುವ ಈ ಹೊತ್ತಿನಲ್ಲಿ ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಆಕ್ಸಿಜನ್ ಸಿಲಿಂಡರಗಳನ್ನು ನೀಡುವ ಮೂಲಕ ಬಹುದೊಡ್ಡ ಕಾರ್ಯ ಮಾಡಿದ್ದಾರೆ ಅವರಿಗೆ ಸರ್ಕಾರದ ಮತ್ತು ಜಿಲ್ಲಾಡಳಿತದ ವತಿಯಿಂದ ಅಭಿನಂದಿಸುವದಾಗಿ ತಿಳಿಸಿದರು.

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಕೋರೋನಾ ವಿಷಯದಲ್ಲಿ ಕಲಬುರಗಿ ಜಿಲ್ಲೆ 4ನೇ ಸ್ಥಾನದಲ್ಲಿತ್ತು ಈಗ 19ನೇ ಸ್ಥಾನಕ್ಕೆ ಬಂದಿದೆ ಮುಂದಿನ ಮೂರು ದಿನಗಳಲ್ಲಿ 24ನೇ ಸ್ಥಾನಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಒಮ್ಮಿಂದೊಮ್ಮೆಲೆ ಬಂದೆರಗಿದ ಆಕ್ಸಿಜನ್ ಸಮಸ್ಯೆಗೆ ಜಿಲ್ಲಾಡಳಿತ ಸರಿ ಹೊಂದಿಸಲು ಬಹಳ ಪ್ರಯಾಸಪಟ್ಟಿತ್ತು ಆದರೆ ಈಗ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತಿವೆ. ಆಳಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಮತ್ತು ಇತರೆ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಭಗವಂತ ಖೂಬಾ, ಡಾ. ಉಮೇಶ ಜಾಧವ, ಶಾಸಕ ಸುಭಾಷ್ ಆರ್ ಗುತ್ತೇದಾರ, ಎಮ್‍ಎಲ್ಸಿ ಬಿ ಜಿ ಪಾಟೀಲ, ಮಾಜಿ ಎಮ್‍ಎಲ್ಸಿ ಅಮರನಾಥ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿ.ಪಂ ಹರ್ಷಾನಂದ ಗುತ್ತೇದಾರ, ಕೆಎಂಎಫ್ ನಿರ್ದೇಶಕ ಸಂತೋಷ ಗುತ್ತೇದಾರ, ಪುರಸಭೆ ಅಧ್ಯಕ್ಷೆ ರಾಜಶ್ರೀ ಖಜೂರೆ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ, ಆಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಹಣಮಂತರಾವ ಮಲಾಜಿ, ಮಲ್ಲಣ್ಣ ನಾಗೂರೆ, ರಾಜಶೇಖರ ಮಲಶೆಟ್ಟಿ, ಮಲ್ಲಿಕಾರ್ಜುನ ಕಂದಗೂಳೆ, ಶರಣು ಕುಮಸಿ, ಮೀರ ಅಹ್ಮದ್, ಕುಮಾರ ಬಂಡೆ ಸೇರಿದಂತೆ ಇತರರು ಇದ್ದರು.