ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ; ಪಿಡಿಒಗೆ ಮನವಿ ಸಲ್ಲಿಕೆ
ಸಾವಳೇಶ್ವರ ಗ್ರಾಪಂ ಎದುರು ಸಿಪಿಐ–ಕಿಸಾನ್ ಸಭಾ ಪ್ರತಿಭಟನೆ
ಆಳಂದ್: ಸವಳೇಶ್ವರ ಗ್ರಾಮ ಪಂಚಾಯಿತ ಮುಂದೆ ಕಿಸಾನ್ ಸಭಾ, ಸಿಪಿಐ ಹಮ್ಮಿಕೊಂಡ ಪ್ರತಿಭಟನಾ ಧರಣಿಯಲ್ಲಿ ಮೌಲಾ ಮುಲ್ಲಾ ಮಾತನಾಡಿದರು. ಧರ್ಮಣ್ಣ ಪೂಜಾರಿ, ಮಹಾದೇವ್ ಮಂಟಿಗಿ ಇತರರು ಇದ್ದರು.
ಆಳಂದ: ವಿವಿಧ ಜನಪರ ಹಾಗೂ ರೈತಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಹಾಗೂ ಅಖಿಲ ಭಾರತ ಕಿಸಾನ್ ಸಭಾ ತಾಲೂಕು ಘಟಕದ ಕಾರ್ಯಕರ್ತರು ಸಾವಳೇಶ್ವರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ (ಪಿಡಿಒ) ಬೇಡಿಕೆಗಳ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕಿಸಾನ್ ಸಭಾ ರಾಜ್ಯ ಕಾರ್ಯಾಧ್ಯಕ್ಷ ಮೌಲಾ ಮುಲ್ಲಾ, ತಾಲೂಕು ಅಧ್ಯಕ್ಷ ಧರ್ಮಣ್ಣ ಪೂಜಾರಿ ಹಾಗೂ ಸಿಪಿಐ ತಾಲೂಕು ಕಾರ್ಯದರ್ಶಿ ಆಷ್ಪಾಕ್ ಮುಲ್ಲಾ, ಗ್ರಾಮೀಣ ಪ್ರದೇಶಗಳ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಗ್ರಾಮ ಪಂಚಾಯಿತಿ ಆಡಳಿತ ತುರ್ತು ಸ್ಪಂದಿಸಬೇಕು. ರೈತರು, ಕೂಲಿಕಾರರು ಹಾಗೂ ಬಡವರ ಮೂಲಭೂತ ಅಗತ್ಯಗಳನ್ನು ಈಡೇರಿಸುವಲ್ಲಿ ಸ್ಥಳೀಯ ಆಡಳಿತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದರು.
ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವುದು, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ಮನವಿಯಲ್ಲಿ ಉಲ್ಲೇಖಿಸಿರುವ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು. ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಮಹಾದೇವ ಪೂಜಾರಿ ಮಂಟಗಿ, ಚಂದ್ರಕಾAತ ಕಲಶೆಟ್ಟಿ, ಶ್ರೀಮಂತ ನಡಿಗೇರಿ ಸೇರಿದಂತೆ ಸಿಪಿಐ ಹಾಗೂ ಕಿಸಾನ್ ಸಭಾ ಕಾರ್ಯಕರ್ತರು ಪಾಲ್ಗೊಂಡಿದ್ದರು.