Shubhashaya News

ಜೇವರ್ಗಿ ಬಳಿ ಸರಣಿ ಅಪಘಾತ: ಐಸರ್ ಲಾರಿ–ಎರಡು ಕಾರುಗಳ ನಡುವೆ ಡಿಕ್ಕಿ

ಜೇವರ್ಗಿ: ಜೇವರ್ಗಿ–ಕಲಬುರಗಿ ಮಾರ್ಗದ ಕಟ್ಟಿ ಸಂಗಾವಿ ಸಮೀಪದ ಹಸನಾಪುರ ಕ್ರಾಸ್ ಬಳಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐಸರ್ ಲಾರಿ ಹಾಗೂ ಎರಡು ಕಾರುಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ.

ಕಲಬುರಗಿ ಕಡೆಯಿಂದ ಜೇವರ್ಗಿ ಕಡೆಗೆ ಅತಿವೇಗವಾಗಿ ಬರುತ್ತಿದ್ದ ಐಸರ್ ಲಾರಿ, ಜೇವರ್ಗಿಯಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಹಾಗೂ ನೆಕ್ಸಾ ಕಾರುಗಳಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣವಾಗಿ ಜಜ್ಜುಮುಜ್ಜಾಗಿವೆ.

ಅಪಘಾತದಲ್ಲಿ ಐಸರ್ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೆಕ್ಸಾ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದ ಇತರ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಅಪಘಾತದಿಂದಾಗಿ ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಿಷಯ ತಿಳಿದು ಫರತಾಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Leave A Reply

Your email address will not be published.