Shubhashaya News

ಮುಖ್ಯ ಗುರುಗಳ ಸಂಘದ ಅಧ್ಯಕ್ಷರಾಗಿ ಶ್ರೀಕಾಂತ ಕಾಚಾಪೂರ , ಕಾರ್ಯದರ್ಶಿಯಾಗಿ ಕಾಲೇಸಾಬ ಭಾಗವಾನ್ ಆಯ್ಕೆ.

ಅಫಜಲಪುರ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲಾ ಬಡ್ತಿ ಪಡೆದ ಮುಖ್ಯ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜೇವರ್ಗಿ ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ ಕಾಚಾಪೂರ ಹಾಗೂ ಕಾರ್ಯದರ್ಶಿಯಾಗಿ ಗೌರ ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀ ಕಾಲೇಸಾಬ ಭಾಗವಾನ್ ಆಯ್ಕೆಯಾಗಿದ್ದಾರೆ.
ಆಗಸ್ಟ್ 9ರಂದು ನಡೆದ ಚುನಾವಣೆಯಲ್ಲಿ ಇಬ್ಬರೂ ಭರ್ಜರಿ ಗೆಲುವು ಸಾಧಿಸಿದರು. ಗೆಲುವಿನ ಬಳಿಕ ಮಾತನಾಡಿದ ಅಧ್ಯಕ್ಷ ಶ್ರೀಕಾಂತ ಕಾಚಾಪೂರ, ಮುಖ್ಯ ಶಿಕ್ಷಕರು ಎದುರಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ–ಬಾಳೆಹಣ್ಣು ಖರೀದಿ ಹಾಗೂ ಮಕ್ಕಳ ನಿರಂತರ ಹಾಜರಾತಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿಹರಿಸಲು ಸಂಘ ಪ್ರಾಮಾಣಿಕವಾಗಿ ಕೆಲಸ ಮಾಡಲಿದೆ ಎಂದರು.
ಮುಖ್ಯ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಂಘವನ್ನು ಮಾದರಿ ಸಂಘವನ್ನಾಗಿ ಬೆಳೆಸಲು ಹಾಗೂ ಮುಖ್ಯ ಶಿಕ್ಷಕರು ತೃಪ್ತಿದಾಯಕವಾಗಿ ಸೇವೆ ಸಲ್ಲಿಸಲು ಅಗತ್ಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಪರಾಭವಗೊಂಡ ಮಣ್ಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಪೂಜಾರಿ ಅವರನ್ನು ಸಂಘದ ಗೌರವಾಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕ.ರಾ.ಸ.ನೌ.ಸಂಘದ ಅಧ್ಯಕ್ಷ ಸಂಜಯಕುಮಾರ ಬಗಲಿ, ಕ.ರಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಸಂಗೂ ಮ್ಯಾಳೇಸಿ, ವಿವಿಧ ಸಂಘಗಳ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು

Leave A Reply

Your email address will not be published.