ಕಲಬುರಗಿ: ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯಸಿಂಗ್, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ ಹಾಗೂ ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ. ಸುಶೀಲಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್, ಜಿಲ್ಲಾಧಿಕಾರಿಗಳು ಹಾಗೂ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಿತಿಯ ಅಧ್ಯಕ್ಷರಾದ ಇಕ್ರಂ ಶರೀಫ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.