Shubhashaya News

ಆಗಸ್ಟ್ 17 ರಂದು ಶಿಶಿಕ್ಷು ಹಾಗೂ ಉದ್ಯೋಗ ಮೇಳ ಆಯೋಜನೆ

ಕಲಬುರಗಿ: ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026ರ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ಶಿಶಿಕ್ಷು ಹಾಗೂ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಈ ಶಿಶಿಕ್ಷು ಹಾಗೂ ಉದ್ಯೋಗ ಮೇಳದಲ್ಲಿ ಕಲಬುರಗಿ ಮತ್ತು ಬೆಂಗಳೂಳೂರಿನಿಂದ ಸುಮಾರು 15 ಕ್ಕೂ ಹೆಚ್ಚು ಉದ್ಯಮೇದಾರರು ಹಾಗೂ ವಿವಿಧ ಬೃಹತ್ ಮತ್ತು ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳು ಭಾಗವಹಿಸಲಿದ್ದಾರೆ.

ಇಚ್ಚೆಯುಳ್ಳ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಶಿಶಿಕ್ಷು ಹಾಗೂ ಉದ್ಯೋಗ ಮೇಳಕ್ಕೆ ತಮ್ಮ ಬಯೋಡೆಟಾ, ಎಸ್.ಎಸ್.ಎಲ್.ಸಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ, ಆಧಾರ್‍ಕಾರ್ಡ್ ಹಾಗೂ ಇತರೆ ಮೂಲ ದಾಖಲಾತಿ ಹಾಗೂ ಪ್ರತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಯಲ್ಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಸಂಸ್ಥೆಯ ದೂರವಾಣಿ ಸಂಖ್ಯೆ: 9844778565, 9481539511 ಮತ್ತು 9740524743 ಗೆ ಸಂಪರ್ಕಿಸಲು ಕೋರಲಾಗಿದೆ.

Leave A Reply

Your email address will not be published.