ಕಲಬುರಗಿ: ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ತೆರೆದ ವಾಹನದಲ್ಲಿ ಪರೇಡ್ ತುಕಡಿ ವೀಕ್ಷಿಸಿ ಗೌರವ ವಂದನೆ ಪಡೆದರು.
ನಂತರ ಶಿಸ್ತುಬದ್ದ ಕವಾಯತು ಸರ್ವರನ್ನು ರೋಮಾಂಚನಗೊಳಿಸಿತ್ತು. ಇದೇ ಸಂದರ್ಭದಲ್ಲಿ ಸಚಿವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಪ್ರಬುದ್ಧ ಮತ್ತು ಸಮೃದ್ಧ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಎಲ್ಲರು ಒಗ್ಗಟ್ಟಿನಿಂದ ಯುವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ ಎಂದು ಕರೆ ನೀಡಿದರು.
ಸಂಸದ ರಾಧಾಕೃಷ್ಣ ದೊಡ್ಡಮನಿ, ಕರ್ನಾಟಕ ರೇಷ್ಮೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಮತ್ತು ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು, ಕೆ.ಕೆ.ಆರ್.ಟಿ.ಸಿ. ಅಧ್ಯಕ್ಷ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಲಾಖೆ, ಕರ್ನಾಟಕ ಮಾಹಿತಿ ಆಯೊಗದ ಕಲಬುರಗಿ ಪೀಠದ ಆಯುಕ್ತ ವೆಂಕಟ್ ಸಿಂಗ್, ಪ್ರಾದೇಶಿಕ ಅಯುಕ್ತರಾದ ಜಹೀರಾ ನಸ್ಸೀಂ, ಐ.ಜಿ.ಪಿ. ಶಾಂತನು ಸಿನ್ಹಾ, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ ಎಂ.ಡಿ. ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಅಯುಕ್ತ
ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಭಾಗವಹಿಸಿದ್ದರು.