Shubhashaya News

ಜ್ಞಾನವಿಕಾಸದಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಉತ್ತೇಜನ

ಆಳಂದ: ಸಾವಳೇಶ್ವರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಯೋಜನಾಧಿಕಾರಿ ಓಂಕೇಶ್ ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಚಂದುಬಾಯಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಆಳಂದ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸರಸಂಬಾ ವಲಯದ ಸಾವಳೇಶ್ವರ ಕಾರ್ಯಕ್ಷೇತ್ರದ ಸಿದ್ದೇಶ್ವರಿ ಜ್ಞಾನವಿಕಾಸ ಕೇಂದ್ರದಲ್ಲಿ ಕೇಂದ್ರ ವಾರ್ಷಿಕೋತ್ಸವ ಆಚರಿಸಲಾಯಿತು.

ಯೋಜನಾಧಿಕಾರಿ ಓಂಕೇಶ್ ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಚಂದುಬಾಯಿ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಯೋಜನಾಧಿಕಾರಿ ಓಂಕೇಶ್, ಜ್ಞಾನವಿಕಾಸ ಕಾರ್ಯಕ್ರಮಗಳು ಮಹಿಳೆಯರಲ್ಲಿ ಜ್ಞಾನ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಅರಿವು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಉದ್ದೇಶ, ಕಾರ್ಯಚಟುವಟಿಕೆಗಳು ಹಾಗೂ ಅವುಗಳಿಂದ ಸದಸ್ಯರು ಪಡೆಯಬಹುದಾದ ಪ್ರಯೋಜನಗಳ ಕುರಿತು ವಿವರಿಸಿದರು.
ಮುಖ್ಯಶಿಕ್ಷಕಿ ಚಂದುಬಾಯಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹೆಣ್ಣುಮಕ್ಕಳ ಹಾಗೂ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ. ಜ್ಞಾನವಿಕಾಸ ಕೇಂದ್ರದAತಹ ಕಾರ್ಯಕ್ರಮಗಳು ಮಹಿಳೆಯರಲ್ಲಿ ಪ್ರತಿಭೆ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವುದರ ಜತೆಗೆ, ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಬಾಲ್ಯದ ನೆನಪುಗಳನ್ನು ಮರುಕಳಿಸುವ ಸಂತಸದ ವಾತಾವರಣ ನಿರ್ಮಿಸಿವೆ ಎಂದರು.
ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ಅವರಲ್ಲಿ ಉತ್ಸಾಹ ಹಾಗೂ ಸ್ನೇಹಭಾವ ಮೂಡಿಸಲಾಯಿತು. ವಲಯದ ಮೇಲ್ವಿಚಾರಕ ವೀರೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ, ಸೇವಾಪ್ರತಿನಿಧಿ ಅವಮ್ಮ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave A Reply

Your email address will not be published.